ರಾಜ್ಯದ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಪಟ್ಟಿ ಈ ಕೆಳಗಿನಂತಿದೆ.
ಕೌಸಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಕಾಂತಾ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ. ಬಾಬು ಜಗಜೀವಣ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮುಂಡರಗಿ ನಾಗರಾಜ್ ಅವರನ್ನು ನೇಮಕ ಮಾಡಿದೆ.
ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರನ್ನಾಗಿ ವಿನೋದ್ ಕೆ.ಅಸೂಟಿ ಅವರನ್ನು ನೇಮಕ ಮಾಡಿದ್ದರೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮಕ್ಕೆ ಅಧ್ಯಕ್ಷರನ್ನಾಗಿ ಬಿ.ಎಚ್.ಹರೀಶ್ ಅವರನ್ನು ನೇಮಕ ಮಾಡಿದೆ.
ಶಿವಮೊಗ್ಗದ ಭದ್ರ ಕಾಡಾಕ್ಕೆ ಅಧ್ಯಕ್ಷರನ್ನಾಗಿ ಡಾ.ಅಂಶುಮಂತ್ ಅವರನ್ನು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜೆ.ಎಸ್.ಆಂಜನೇಯಲು ಅವರನ್ನು ನೇಮಕ ಮಾಡಿದೆ. ಕರ್ನಾಟಕ ದ್ರಾಕ್ಷರಸ ಮಂಡಳಿಗೆ ಅಧ್ಯಕ್ಷರನ್ನಾಗಿ ಡಾ.ಬಿ.ಯೋಗೇಶ್ ಬಾಬು ಅವರನ್ನು ಮತ್ತು ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಮರೀಗೌಡ ಯಾದಗಿರಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ದೇವೇಂದ್ರಪ್ಪ ವರ್ತೂರು ಅವರನ್ನು ನೇಮಕ ಮಾಡಿದ್ದರೆ, ಕರ್ನಾಟಕ ಜೈವಿಕ ಇಂಧನ ರಾಜಶೇಖರ್ ರಾಮಸ್ವರಂ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿ ಕೆ.ಮರಿಗೌಡ ಅವರನ್ನು ನೇಮಕ ಮಾಡಿದೆ. ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಗೆ ಎಸ್.ಮನೋಹರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ.
ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆಗೆ ಅಯೂಬ್ ಖಾನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಗೇರು ಅಭಿವೃದ್ಧಿ ನಿಗಮಕ್ಕೆ ಮಮತಾ ಗಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಕರ್ನಾಟಕ ರಾಜ್ಯ ಸಾಂಬಾರು ಪಾದಾರ್ಥಗಳ ಅಭಿವೃದ್ಧಿ ಮಂಡಳಿಗೆ ಜಿ.ಪಲ್ಲವಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ತೆಂಗು ಅಭಿವೃದ್ಧಿ ಮಂಡಳಿಗೆ ಹೆಚ್.ಸಿ.ಸುಧೀಂದ್ರ ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಎಚ್.ಎಸ್.ಸುಂದರೇಶ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಗೆ ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಜಯಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಕ ಮಾಡಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಆರ್.ಸಂಪತ್ ರಾಜ್ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಮಹಿಳಾ ಅಭಿವೃದ್ಧಿ ನಿಗಮಕ್ಕೆ ಪದ್ಮಾವತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಶ್ರೀನಿವಾಸ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಶಾಕಿರ್ ಸನದಿ, ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೋಮಣ್ಣ ಬೇವಿನಮರದ, ಕಂಠೀರವ ಸ್ಟುಡಿಯೋಕ್ಕೆ ಮೆಹಬೂಬ್ ಪಾಷಾ, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಕೀರ್ತಿ ಗಣೇಶ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ದೇವರಾಜು ಅರಸು ಟ್ರಕ್ ಟರ್ಮಿನಲ್ ಗೆ ಮಜರ್ ಖಾನ್ ಅವರನ್ನು ನೇಮಿಸಿದೆ.
ಕರ್ನಾಟಕ ಸಫಾಯಿ ಕರ್ಮಾಚಾರಿ ಆಯೋಗಕ್ಕೆ ಸವಿತಾ ರಘು, ಕರ್ನಾಟಕ ವಿದ್ಯುತ್ ಕಾರ್ಖಾನೆಗೆ ಲಲಿತ್ ರಾಘವ್, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಜಿ.ಎಸ್.ಮಂಜುನಾಥ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮಕ್ಕೆ ಮಾಲಾ ನಾರಾಯಣರಾವ್, ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮಕ್ಕೆ ರಿಜ್ವಾನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.
ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕೇಶವರೆಡ್ಡಿ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ ಪೀರ್, ಮೈಸೂರು ಸಕ್ಕರೆ ಕಾರ್ಖಾನೆಗೆ ಗಂಗಾಧರ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಅಲ್ತಾಪ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಬ್ರಾಹ್ಮಣರ ಅಭಿವೃದ್ಧಿ ಮಂಡಳಿಗೆ ಜಯಸಿಂಹ ಅವರನ್ನು ನೇಮಕ ಮಾಡಿದೆ.
ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರಕ್ಕೆ ವಿಜಯ್ ಕೆ.ಮುಳಗುಂದ್, ಕಾಡಾ ಆದ್ಯಕ್ಷರನ್ನಾಗಿ ಮರಿಸ್ವಾಮಿ ಅವರನ್ನು ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸದಾಶಿವ ಉಲ್ಲಾಳ್, ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಕಾರ್ ಪ್ರದೇಶ ಯೋಜನೆ ಪ್ರಾಧಿಕಾರಕ್ಕೆ ರಘುನಂದನ್ ರಾಮಣ್ಣ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಬಸವರಾಜ್ ಜಾಬಶೆಟ್ಟಿ, ಹಾಗೂ ಕರ್ನಾಟಕ ಚಲನಚಿತ್ರ ಮಂಡಳಿಗೆ ಸಾಧುಕೋಕಿಲ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.