Thursday, September 19, 2024
Google search engine
Homeರಾಜಕೀಯಜನರೊಂದಿಗೆ ಚೆಲ್ಲಾಟ ಆಡುತ್ತಿರುವ ಸರ್ಕಾರ - ಕಾಂಗ್ರೆಸ್ ಆರೋಪ

ಜನರೊಂದಿಗೆ ಚೆಲ್ಲಾಟ ಆಡುತ್ತಿರುವ ಸರ್ಕಾರ – ಕಾಂಗ್ರೆಸ್ ಆರೋಪ

ಕೋವಿಡ್ 2ನೇ ಅಲೆಯಲ್ಲಿ ಆಗಿರುವ ನಷ್ಟಕ್ಕೆ ರೈತರಿಗೆ ಸರ್ಕಾರದಿಂದ ಈವರೆಗೂ ಪರಿಹಾರ ಸಿಕ್ಕಿಲ್ಲ. ಬೆಳೆಗೆ ಬೆಲೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ಸರ್ಕಾರ ಇದ್ಯಾವುದರ ಬಗ್ಗೆಯೂ ಚಿಂತಿಸದೇ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು ‘ಹೊಸ ಸರ್ಕಾರ ಬಂದಿದೆ, ಜನರ ರಕ್ಷಣೆ ಮಾಡುತ್ತದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ. ಈ ನಡುವೆ ಎಲ್ಲಿ ಹೋದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ, ಅವರು ಬೆಳೆದ ಟಮೋಟೋ, ತರಕಾರಿಗಳಿಗೆ ಬೆಲೆ ಸಿಗದೇ ರಸ್ತೆಗೆ ಎಸೆಯುತ್ತಿರುವ ಚಿತ್ರಣ ನಮ್ಮ ಕಣ್ಣಮುಂದೆ ಇದೆ. ನೂತನ ಮುಖ್ಯಮಂತ್ರಿಗಳು ರೈತರು, ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವವರ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಜಗದೀಶ್ ಶೆಟ್ಟರ್ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚಿಂತನೆ ಮಾಡಬೇಕಿದೆ, ಅಧಿವೇಶನ ಕರೆಯುತ್ತೇವೆ ಎಂದಿದ್ದರು. ಈಗ ಉತ್ತರ ಕರ್ನಾಟಕ ಭಾಗದ ಮುಖ್ಯಮಂತ್ರಿಗಳೇ ಇದ್ದಾರೆ. ಯಾವಾಗ ಕರೆಯುತ್ತಾರೋ ನೋಡೋಣ. ತರಾತುರಿಯಲ್ಲಿ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು.

ಪಕ್ಷದ ನಾಯಕರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿರುವ ಬಗ್ಗೆ ಕಾನೂನು ಅರಿವಿನ ವಿಚಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ನಾನು ಈ ಬಗ್ಗೆ ವೈಯಕ್ತಿಯವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಖಾಸಗಿಯಾಗಿ ನನ್ನ ಅನುಭವವನ್ನು ಅವರೊಟ್ಟಿಗೆ ಹಂಚಿಕೊಳ್ಳಲು ಸಿದ್ಧನಿದ್ದೇನೆ. ಸಾರ್ವಜನಿಕವಾಗಿ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುರಿತಾಗಿ ಜಮೀರ್ ಅವರು ಮಾಡಿರುವ ಆರೋಪಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅವರು ಇವರ ಬಗ್ಗೆ ಹೇಳಿದರೆ, ಇವರು ಅವರ ಬಗ್ಗೆ ಮಾತನಾಡಿದರೆ, ನೀವು ಅವರನ್ನೇ ಕೇಳಬೇಕು. ಆ ವಿಚಾರವಾಗಿ ನನ್ನನ್ನು ಯಾಕೆ ಕೇಳುತ್ತಿದ್ದೀರಿ’ ಎಂದು ಶಿವಕುಮಾರ್ ಪ್ರಶ್ನಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular