Saturday, July 27, 2024
Google search engine
Homeಮುಖಪುಟಶಿಕ್ಷಕರ ಸಮಸ್ಯೆ ಬಗೆಹರಿಸುವಲ್ಲಿ ನಾರಾಯಣಸ್ವಾಮಿ ವಿಫಲ - ತಾಳಿಕಟ್ಟೆ ಆರೋಪ

ಶಿಕ್ಷಕರ ಸಮಸ್ಯೆ ಬಗೆಹರಿಸುವಲ್ಲಿ ನಾರಾಯಣಸ್ವಾಮಿ ವಿಫಲ – ತಾಳಿಕಟ್ಟೆ ಆರೋಪ

ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾಗಿ ವೈ.ಎ.ನಾರಾಯಣಸ್ವಾಮಿ ಶಿಕ್ಷಕರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ಇನ್ನೊಂದು ಅವಕಾಶ ಕೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ರೂಫ್ಸಾ ಅಧ್ಯಕ್ಷ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಆಗ್ನೇಯ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿರುವ ನಾರಾಯಣಸ್ವಾಮಿ ಬಹಿರಂಗವಾಗಿ ಶಿಕ್ಷಕರಿಗೆ ಔತಣಕೂಟ ಏರ್ಪಡಿಸುವ ಮೂಲಕ ಸುಶಿಕ್ಷಿತ ಸಮುದಾಯವನ್ನು ಸಮಾಜದ ದೃಷ್ಟಿಯಲ್ಲಿ ಕಳಂಕಿತರನ್ನಾಗಿ ಮಾಡಿದ್ದೇ ಅವರ ಸಾಧನೆಯಾಗಿದೆ ಎಂದು ಆಪಾದಿಸಿದರು.

ರಾಜ್ಯದಲ್ಲಿ ಸುಮಾರು 4.80 ಲಕ್ಷ ಶಿಕ್ಷಕರಿದ್ದಾರೆ. ಇವರಲ್ಲಿ ಸರ್ಕಾರಿ ಶಾಲೆಯ ಸುಮಾರು 1.20 ಲಕ್ಷ ಶಿಕ್ಷಕರನ್ನು ಹೊರತುಪಡಿಸಿದರೆ ಉಳಿದಂತೆ ಸುಮಾರು 3.50 ಲಕ್ಷದಷ್ಟು ಶಿಕ್ಷಕರು ಉದ್ಯೋಗ ಭದ್ರತೆಯಿಲ್ಲದೆ ಸರಿಯಾದ ವೇತನವಿಲ್ಲದೆ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ ಕಳೆದ 20 ವರ್ಷಗಳಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿರುವ ನಾರಾಯಣಸ್ವಾಮಿ ಒಂದು ಬಾರಿಯೂ ಶಿಕ್ಷಕರ ಸಮಸ್ಯೆ ಕುರಿತು ಮಾತನಾಡಿಲ್ಲ ಎಂದು ದೂರಿದರು.

ಸರ್ಕಾರಿ ಶಿಕ್ಷಕರು ಟೈಮ್ ಬಾಂಡ್ ಪ್ರಮೋಷನ್, ಹಳೆಯ ಪಿಂಚಣಿ ವ್ಯವಸ್ಥೆ ಜಾರಿ, ವೇತನ ತಾರತಮ್ಯ ನಿವಾರಣೆ ಸೇರಿ ಹಲವು ಸಮಸ್ಯೆಗಳ ಜೊತೆಗೆ ಬಿಎಲ್ಒಗಳಾಗಿ ಅನ್ಯ ಕಾರ್ಯಗಳಿಗೆ ನೇಮಕಗೊಂಡು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅನುದಾನಿತ ಶಾಲೆಗಳ ಶಿಕ್ಷಕರು ಸರ್ಕಾರದಿಂದ ವೇತನ ಪಡೆಯುವುದನ್ನು ಬಿಟ್ಟರೆ ಪಿಂಚಣಿ ಇಲ್ಲದೆ ಬರಿಗೈಯಲ್ಲಿ ಮನೆಗೆ ಹೋಗುವಂತಹ ಪರಿಸ್ಥಿತಿ ಇದೆ ಎಂದರು.

ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿದ್ದು, ಆಧುನಿಕ ಜೀತದಾಳುಗಳಾಗಿದ್ದಾರೆ. ಬೇರೆ ರಾಜ್ಯಗಳಲ್ಲಿ ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಅರ್ಧದಷ್ಟು ವೇತನವನ್ನು ಸರ್ಕಾರವೇ ನೀಡುತ್ತದೆ. ಆದರೆ ಕರ್ನಾಟಕದಲ್ಲಿ ಇದು ಜಾರಿಯಲ್ಲಿ ಇಲ್ಲ. ಈ ವಿಚಾರಗಳ ಬಗ್ಗೆ ನಾರಾಯಣಸ್ವಾಮಿ ಸದನದಲ್ಲಿ ಮಾತನಾಡಿದ್ದರೆ ದಾಖಲೆ ಸಮೇತ ಮಾಹಿತಿ ನೀಡಲಿ ಎಂದು ಸವಾಲು ಹಾಕಿದರು.

ಸರ್ಕಾರ ಹಟಕ್ಕೆ ಬಿದ್ದು ಆರ್.ಟಿ.ಇ ನಿಯಮಗಳಿಗೆ ವಿರುದ್ಧವಾಗಿ 5, 8 ಮತ್ತು 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಮುಂದಾದಾಗ ವಿಧಿಯಿಲ್ಲದೆ ನ್ಯಾಯಾಲಯದ ಮೆಟ್ಟಿಲು ಹತ್ತಬೇಕಾಯಿತು. ಇದು ಸರ್ಕಾರವೇ ಮಾಡಿಕೊಂಡ ಎಡವಟ್ಟು. ಆರ್.ಟಿ.ಇ ನಿಯಮ ಕಲಂ 23 ಮತ್ತು 30ರ ಅನ್ವಯ ಸಿಸಿಇ ಇರಬೇಕು. ಆದರೆ ಪಬ್ಲಿಕ್ ಪರೀಕ್ಷೆ ಹೆಸರಿನಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಕಳುಹಿಸುವ ಹುನ್ನಾರದ ವಿರುದ್ಧ ಧ್ವನಿ ಎತ್ತಿದ ಪರಿಣಾಮ ಸುಪ್ರೀಂಕೋರ್ಟ್ ನಮಗೆ ನ್ಯಾಯ ಒದಗಿಸಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular