Friday, October 18, 2024
Google search engine
Homeಮುಖಪುಟತೀವ್ರ ವಿರೋಧದ ನಡುವೆಯೂ ತುಮಕೂರು ಕ್ಷೇತ್ರಕ್ಕೆ ಬಿಜೆಪಿಯಿಂದ ವಿ.ಸೋಮಣ್ಣಗೆ ಟಿಕೆಟ್

ತೀವ್ರ ವಿರೋಧದ ನಡುವೆಯೂ ತುಮಕೂರು ಕ್ಷೇತ್ರಕ್ಕೆ ಬಿಜೆಪಿಯಿಂದ ವಿ.ಸೋಮಣ್ಣಗೆ ಟಿಕೆಟ್

ಲೋಕಸಭಾ ಚುನಾವಣೆಗೆ ಕರ್ನಾಟಕ ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆಗೊಳಿಸಿರುವ ಬಿಜೆಪಿ ರಾಜ್ಯದ ಹಾಲಿ 9 ಬಿಜೆಪಿ ಸಂದಸರಿಗೆ ಟಿಕೆಟ್ ನೀಡಿಲ್ಲ.

ಮೈಸೂರು ಕೊಡುಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದ್ದು ಅವರ ಬದಲಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನಿರೀಕ್ಷೆಯಂತೆಯೇ ವಿ.ಸೋಮಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ.

ಚಿಕ್ಕೋಡಿ ಕ್ಷೇತ್ರಕ್ಕೆ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ, ಬಾಗಲಕೋಟೆಗೆ ಪಿ.ಸಿ.ಗದ್ದಿಗೌಡರ್, ವಿಜಯಪುರಕ್ಕೆ ರಮೇಶ್ ಜಿಗಜಿಣಗಿ, ಗುಲ್ಬರ್ಗಾ ಕ್ಷೇತ್ರಕ್ಕೆ ಡಾ.ಉಮೇಶ್ ಜಾಧವ್, ಬೀದರ್ ಕ್ಷೇತ್ರಕ್ಕೆ ಭಗವಂತ್ ಖೂಬಾ ಅವರಿಗೆ ಟಿಕೆಟ್ ನೀಡಲಾಗಿದೆ.

ಕೊಪ್ಪಳ ಕ್ಷೇತ್ರಕ್ಕೆ ಡಾ.ಬಸವರಾಜ ಕ್ಯಾವತೂರ್, ಬಳ್ಳಾರಿ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು, ಹಾವೇರಿಗೆ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಲಭ್ಯವಾಗಿದೆ.

ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್ ಜೋಶಿ, ದಾವಣಗೆರೆಗೆ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಟಿಕೆಟ್ ದೊರೆತಿದೆ. ಶಿವಮೊಗ್ಗ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಡಾ.ಬ್ರಿಜೇಶ್ ಚೌಟಾ, ಚಾಮರಾಜನಗರ ಕ್ಷೇತ್ರಕ್ಕೆ ಎಸ್.ಬಾಲರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಾ.ಸಿ.ಎನ್. ಮಂಜುನಾಥ್, ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ, ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಪಿ.ಸಿ.ಮೋಹನ್, ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular