ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆಯವರನ್ನು ರಾಜ್ಯ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನವರಾದ ಡಾ.ರವಿಕುಮಾರ್ ನೀಹ ಅವರನ್ನು ನೇಮಕ ಮಾಡಲಾಗಿದೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ವಿಜಯಪುರದ ಡಾ.ಚನ್ನಪ್ಪ ಕಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ತುಮಕೂರು ಜಿಲ್ಲೆಯ ತಿಪಟೂರಿನವರಾದ ಸಾಹಿತಿ ಡಾ.ಎಸ್.ಗಂಗಾಧರಯ್ಯ ಅವರನ್ನು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮೈಸೂರಿನ ಲೇಖಕಿ ಮಾನಸ ಅವರನ್ನು ನೇಮಕ ಮಾಡಿದ್ದರೆ, ಡಾ.ಲಕ್ಷ್ಮಣ ಕೊಡಸೆ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿದೆ.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬೆಳಗಾವಿಯ ಅಶೋಕ್ ಚಂದರಗಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿ ತುಮಕೂರಿನ ಎಲ್.ಎನ್.ಮುಕುಂದರಾಜ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರನ್ನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾಹಿತಿ ಕೆ.ವಿ.ನಾಗರಾಜಮೂರ್ತಿ ಅವರನ್ನು ನೇಮಕ ಮಾಡಿದೆ.
ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರನ್ನಾಗಿ ತುಮಕೂರು ಜಿಲ್ಲೆಯ ತಿಪಟೂರಿನ ರಂಗ ಸಂಘಟಕ ಉಗಮ ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಲಿಲಿತ ಕಲಾ ಅಕಾಡೆಮಿ ಅಧ್ಯಕ್ಷರನ್ನಾಗಿ ಡಾ.ಪ.ಸ.ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರೆ, ಸದಸ್ಯರಾಗಿ ತುಮಕೂರಿನ ಮನುಚಕ್ರವರ್ತಿ ನೇಮಕ ಮಾಡಿದ್ದಾರೆ.
ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರನ್ನಾಗಿ ಚಿಕ್ಕಬಳ್ಳಾಪುರದ ಶಿವಪ್ರಸಾದ್ ಗೊಲ್ಲಹಳ್ಳಿ ಅವರನ್ನು ನೇಮಕ ಮಾಡಿದೆ. ಸದಸ್ಯರಾಗಿ ತುಮಕೂರಿನ ಕೆಂಕೆರೆ ಮಲ್ಲಿಕಾರ್ಜುನ ಅವರನ್ನು ನೇಮಕ ಮಾಡಲಾಗಿದೆ.