ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಖಾಲಿಯಿರುವ 30 ಲಕ್ಷ ಸರ್ಕಾರಿ ಉದ್ಯೋಗಗಳಿಗೆ ಖಾಯಂ ನೇಮಕಾತಿ ಮಾಡಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಡಿಪ್ಲೊಮಾ ಹಾಗೂ ಪದವಿ ಪಡೆದವರಿಗೆ 1 ವರ್ಷದ ವರೆಗೆ ಪ್ರಶಿಕ್ಷಣ (ಅಪ್ರೆಂಟಿಸ್) ತರಬೇತಿಯ ಜೊತೆಗೆ ರೂ.1 ಲಕ್ಷ ವೇತನ ನೀಡಲಿದೆ ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ನೇಮಕಾತಿ ಪರೀಕ್ಷೆಗಳನ್ನು ವಿಶ್ವಾಸಾರ್ಹವಾಗಿಸಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ದೇಶಾದ್ಯಂತ ಹೊಸ ಕಾನೂನನ್ನು ಜಾರಿ ಮಾಡಲಿದೆ ಎಂದಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಯುವ ಉದ್ಯಮಿಗಳನ್ನು ಬೆಳೆಸಲು ಜಿಲ್ಲಾ ಹಂತದಲ್ಲಿ ರೂ. 5,000 ಕೋಟಿಯ ಸ್ಟಾರ್ಟ್ ಅಪ್ ನಿಧಿ ಸ್ಥಾಪನೆ ಮಾಡಲಿದೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಉತ್ತಮ ಕಾರ್ಮಿಕ ವಲಯ ನಿರ್ಮಾಣ, ವಿಮೆ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಗಿಗ್ ಆರ್ಥಿಕತೆಗೆ ಭದ್ರತೆ ನೀಡಲಿದೆ ಎಂದು ತಿಳಿಸಿದ್ದಾರೆ.