Friday, November 22, 2024
Google search engine
Homeಮುಖಪುಟಬಿಜೆಪಿ ಅಭ್ಯರ್ಥಿಗಳನ್ನು ಮತದಾರರು ತಿರಸ್ಕರಿಸಿ - ಡಾ.ಜಿ.ಪರಮೇಶ್ವರ್

ಬಿಜೆಪಿ ಅಭ್ಯರ್ಥಿಗಳನ್ನು ಮತದಾರರು ತಿರಸ್ಕರಿಸಿ – ಡಾ.ಜಿ.ಪರಮೇಶ್ವರ್

ಬಿಜೆಪಿ ಅಭ್ಯರ್ಥಿಗಳನ್ನು ಮತದಾರರು ತಿರಸ್ಕರಿಸಿ – ಡಾ.ಜಿ.ಪರಮೇಶ್ವರ್
ತುಮಕೂರು- ಕೇಂದ್ರದಲ್ಲಿ ೧೦ ವರ್ಷಗಳ ಕಾಲ ಆಡಳಿತ ನಡೆಸಿರುವ ಎನ್‌ಡಿಎ ಸರ್ಕಾರದ ಜನ ವಿರೋಧಿ ಧೋರಣೆ ಯಿಂದಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ರಾಜ್ಯ ಮತ್ತು ದೇಶಾದ್ಯಂತ ಬಿಜೆಪಿ ಅಭ್ಯರ್ಥಿಗಳನ್ನು ಮತದಾರರು ತಿರಸ್ಕರಿಸಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳವಾರ ಮನವಿ ಮಾಡಿದರು.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ದೆಹಲಿ ಹೋಗಿ ಪ್ರತಿಭಟನೆ ನಡೆಸಬೇಕಾಯಿತು. ಆದರೂ ಪ್ರಧಾನಮಂತ್ರಿಯಾಗಲೀ, ಕೇಂದ್ರ ಗೃಹ ಸಚಿವರಾಗಲೀ ಸಮಸ್ಯೆಗಳನ್ನು ಸರಿಪಡಿಸುವ ಭರವಸೆಯನ್ನು ನೀಡಲಿಲ್ಲ. ಇದನ್ನು ಗಮನಿಸಿದರೆ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ ಎಂಬುದು ಗೊತ್ತಾಗುತ್ತದೆ ಎಂದರು.

ಇತಿಹಾಸದಲ್ಲೇ ಕರ್ನಾಟಕಕ್ಕೆ ಇಷ್ಟೊಂದು ಬರಗಾಲ ಬಂದಿರಲಿಲ್ಲ. ಈ ಭೀಕರ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ನಿಭಾಯಿಸುತ್ತಿದ್ದು, ರಾಜ್ಯದಲ್ಲಿ ಬರದಿಂದಾಗಿ ೩೬ ಸಾವಿರ ಕೋಟಿ ನಷ್ಟ ಉಂಟಾಗಿದ್ದರೂ ಸಹ ಕೇವಲ ೧೮ ಸಾವಿರ ಕೋಟಿ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ವರದಿ ಸಲ್ಲಿಸಲಾಗಿದೆ. ಆದರೂ ಇದುವರೆಗೂ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯಿಂದ ರಾಜ್ಯದ ಜನತೆ ಸಂಕಷ್ಟ ಅನುಭವಿಸುವಂತಾಗಿದೆ. ಆದರೆ ರಾಜ್ಯ ಸರ್ಕಾರ ತನ್ನ ಹಣದಲ್ಲೇ ಪ್ರತಿಯೊಬ್ಬ ರೈತರಿಗೂ ೨ ಸಾವಿರ ರೂ. ಬರ ಪರಿಹಾರವನ್ನು ನೀಡಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಯಾವುದೇ ರೀತಿಯ ಸಮಸ್ಯೆ ಉಂಟಾಗದAತೆ ಕ್ರಮ ಕೈಗೊಂಡಿದೆ ಎಂದರು.

ಕೇAದ್ರಕ್ಕೆ ಕರ್ನಾಟಕದಲ್ಲಿ ೪.೫೦ ಲಕ್ಷ ಸಾವಿರ ಕೋಟಿ ಜಿಎಸ್‌ಟಿ ತೆರಿಗೆ ಹಣವನ್ನು ಸಂಗ್ರಹಿಸಿ ನೀಡಲಾಗುತ್ತಿದೆ. ದೇಶದಲ್ಲೇ ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೂ ನಮ್ಮ ಪಾಲಿನ ತೆರಿಗೆ ಹಣವನ್ನು ಸಮರ್ಪಕವಾಗಿ ಕೇಂದ್ರ ಸರ್ಕಾರ ನೀಡುತ್ತಿಲ್ಲ. ೨೦೨೧-೨೨ ರಲ್ಲಿ ಶೇ. ೩.೨ ರಷ್ಟು ಮಾತ್ರ ತೆರಿಗೆ ಪಾಲನ್ನು ನಮ್ಮ ರಾಜ್ಯ ಕೊಟ್ಟಿದೆ. ಇದರಿಂದ ಕೇಂದ್ರ ಮತ್ತು ರಾಜ್ಯದ ಸಂಬAಧ ಹಾಳಾಗಿದೆ ಎಂದರು.

ಕೇAದ್ರ ಸರ್ಕಾರವು ರಾಜ್ಯ ಸರ್ಕಾರಗಳನ್ನು ತೀರಾ ಕೀಳಾಗಿ ಕಾಣುತ್ತಿದೆ. ವಿರೋಧ ಪಕ್ಷಗಳು ಆಡಳಿತದಲ್ಲಿರುವ ಸರ್ಕಾರಗಳನ್ನು ಟಾರ್ಗೆಟ್ ಮಾಡಿ ಆ ಸರ್ಕಾರಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರದ ಭದ್ರಾ ಮೇಲ್ದಂಡೆ ಯೋಜನೆಗೆ ೫ ಸಾವಿರ ಕೋಟಿ ಘೋಷಣೆ ಮಾಡಿತ್ತು. ಆದರೆ ಇದುವರೆಗೂ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ಇಂತಹ ಪಕ್ಷಕ್ಕೆ ಜನರು ಮತ ಹಾಕೇಬೇಕೆ ಎಂದು ಪ್ರಶ್ನಿಸಿದರು.

ತುಮಕೂರು ಜಿಲ್ಲೆಯಲ್ಲಿ ಸರಳ, ಸಜ್ಜನಿಕೆಯ ಎಸ್.ಪಿ. ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಮತ್ತೊಮ್ಮೆ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಕೇಂದ್ರದ ಮಲತಾಯಿ ಧೋರಣೆ ಖಂಡನೀಯ. ಎನ್‌ಡಿಆರ್‌ಎಫ್ ಹಣ ಭಿಕ್ಷೆಯಲ್ಲ, ನಮಗೂ ಅದರ ಮೇಲೆ ಹಕ್ಕಿದೆ. ಕೇಂದ್ರದಿAದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಚುನಾವಣೆಯಲ್ಲಿ ತುಮಕೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಬೇಕು. ಈ ಮೂಲಕ ಏಕೆ ಹೀಗೆ ಆಯಿತು ಎಂದು ಬಿಜೆಪಿ ನಾಯಕರಿಗೆ ಮನದಟ್ಟು ಮಾಡಿಕೊಡಬೇಕು ಎಂದರು.

ಮಾಜಿ ಸಂಸದ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಮಾತನಾಡಿ, ಇಡೀ ಜಿಲ್ಲೆಯ ಭೌಗೋಳಿಕ ಚಿತ್ರಣ ಬಲ್ಲವನಾಗಿದ್ದೇನೆ. ಮಧುಗಿರಿಯಲ್ಲಿ ಶೇಂಗಾ, ತಿಪಟೂರು ಕೊಬ್ಬರಿ, ತುಮಕೂರು ಗ್ರಾಮಾಂತರದಲ್ಲಿ ರಾಗಿ, ಗುಬ್ಬಿ-ತುರುವೇಕೆರೆಯಲ್ಲಿ ಚಿರತೆ, ಮಧುಗಿರಿ-ಕೊರಟಗೆರೆಯಲ್ಲಿ ಕರಡಿ ಸಮಸ್ಯೆ ಇದೆ. ಈ ಎಲ್ಲವನ್ನು ಸಮಸ್ಯೆಗಳನ್ನು ಬಲ್ಲವನಾಗಿದ್ದೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್, ಮಾಜಿ ಶಾಸಕರಾದ ಎಸ್. ಷಫಿಅಹಮದ್, ಡಾ. ರಫೀಕ್‌ಅಹಮದ್, ಗಂಗಹನುಮಯ್ಯ, ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಇಕ್ಬಾಲ್ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular