Friday, October 18, 2024
Google search engine
Homeಮುಖಪುಟಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಹೋಗೋಣ - ಡಿ.ಕೆ.ಶಿವಕುಮಾರ್

ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಹೋಗೋಣ – ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಎಂದರೆ ಹಲವು ನದಿಗಳ ಸಂಗಮ. ಕಾಂಗ್ರೆಸ್ ಪಕ್ಷ ಪವಿತ್ರವಾದ ದೇವಸ್ಥಾನ. ನಾವೆಲ್ಲಾ ಈ ದೇಶವನ್ನು ಕಾಪಾಡಲು ಈ ದೇವಸ್ಥಾನದಲ್ಲಿ ಸೇರಿದ್ದೇವೆ. ನೀವು ಈಶ್ವರ, ವೆಂಕಟೇಶ್ವರ ಹೀಗೆ ಯಾವುದೇ ದೇವಸ್ಥಾನಕ್ಕೆ ಹೋದರು ದೇವರು ಆಶೀರ್ವಾದ ಮಾಡುವುದು ಈ ಹಸ್ತದಿಂದ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದ ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ಶಿಡ್ಲಘಟ್ಟದ ನಾಯಕ ಪುಟ್ಟ ಆಂಜನಪ್ಪ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ಸೇರಿದ ನಂತರ ಹಳಬರು, ಹೊಸಬರು ಎನ್ನುವ ತಾರತಮ್ಯ ನಮ್ಮಲ್ಲಿ ಇಲ್ಲ. 50 ವರ್ಷ ಪಕ್ಷ ಕಟ್ಟಿರುವವರು ಮತ್ತು ಹೊಸಬರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸವನ್ನು ನಾವು, ನೀವು ಎಲ್ಲರೂ ಸೇರಿ ಮಾಡಬೇಕು. ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಹೋಗಬೇಕು ಎಂದು ಸಲಹೆ ನೀಡಿದರು.

ಇಡೀ ದೇಶದಲ್ಲೇ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರಿಗೆ ತಾವು ಗೆಲ್ಲುವುದಿಲ್ಲ ಎನ್ನುವುದು ಅರ್ಥವಾಗಿದೆ. ಇದಕ್ಕಾಗಿ 12 ಅಭ್ಯರ್ಥಿಗಳನ್ನು ಬದಲಾಯಿಸಿದ್ದಾರೆ. ಆಪರೇಷನ್ ಕಮಲ ಮಾಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದವರ ಜತೆಗೆ ಈಗ ನೆಂಟಸ್ಥನ ಮಾಡಿಕೊಂಡಿದ್ದಾರೆ ಎಂದರು.

ಕುಮಾರಸ್ವಾಮಿ ಸರಿ ಇಲ್ಲ ಎಂದವರೇ ಕುಮಾರಸ್ವಾಮಿಯ ಬೆಂಬಲ ಬೇಕು ಎಂದು ಹೊರಟಿದ್ದಾರೆ. ಅವರ ನೀತಿ, ಸಿದ್ಧಾಂತದ ಬಗ್ಗೆ ಚರ್ಚೆ ಮಾಡುವುದು ಬೇಡ. ಎಂತಹ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಜನ ಅವರನ್ನು ನೋಡಿ ನಗುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಚಿಕ್ಕಬಳ್ಳಾಪುರದಲ್ಲಿ ಜಾತಿ, ನೀತಿಯ ಮಾತುಗಳು ಕೇಳಿಬರುತ್ತಿದೆ. ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವಾಗ ಎಲ್ಲಿ ಹೋಗಿತ್ತು ಈ ಜಾತಿ, ನೀತಿ. ಕಾಂಗ್ರೆಸ್ ಪಕ್ಷ ಎಂಟು ಮಂದಿ ಒಕ್ಕಲಿಗರಿಗೆ ಟಿಕೆಟ್ ನೀಡಿದೆ. ಒಕ್ಕಲಿಗರಿಗೆ ಬಿಜೆಪಿ, ಜೆಡಿಎಸ್ ಎರಡೂ ಮಾನ್ಯತೆ ನೀಡಿಲ್ಲ. ಒಂದೇ ಕುಟುಂಬದ ಮೂರು ಮಂದಿ ದಳ ಮತ್ತು ಬಿಜೆಪಿಯಿಂದ ಚುನಾವಣೆ ಎದುರಿಸುತ್ತಿದ್ದಾರೆ. ಭವಿಷ್ಯದಲ್ಲಿ ದಳ ಎಲ್ಲಿರುತ್ತದೆ ಗೊತ್ತಿಲ್ಲ. ದೇವೇಗೌಡರು ತಮ್ಮ ಅಳಿಯನನ್ನೇ ಬಿಜೆಪಿಯಿಂದ ನಿಲ್ಲಿಸಿದ ಮೇಲೆ ದಳದ ಚಿಹ್ನೆ ಮತ್ತು ಆ ಪಕ್ಷಕ್ಕೆ ಬೆಲೆಯೇ ಇಲ್ಲದಂತಾಗಿದೆ ಎಂದು ಕೇಳಿದರು.

ಹಿರಿಯರಾದ ಕೆ.ಪಿ.ಬಚ್ಚೇಗೌಡರು ಸಿದ್ದಾಂತದ ಮೇಲೆ ರಾಜಕಾರಣ ಮಾಡಿಕೊಂಡು ಬಂದವರು. ದೇವೇಗೌಡರ ಮಾತು ಎಂದರೆ ಅಪಾರವಾದ ವಿಶ್ವಾಸ ಅವರಿಗೆ. ಅವರನ್ನು ಪಕ್ಷದಲ್ಲಿ ಬಹಳ ತುಚ್ಛವಾಗಿ ಕಂಡರು ಎಂಬುದರ ಬಗ್ಗೆ ವಿಷಾದವಿದೆ. ನಂತರ ನನ್ನ ಮತ್ತು ಮುಖ್ಯಮಂತ್ರಿಗಳ ಬಳಿ ಮಾತನಾಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಚ್ಚೇಗೌಡರ ಬೆಂಬಲಿಗರು ಮತ್ತು ಕುಟುಂಬಸ್ಥರನ್ನು ಗೌರವಯುತವಾಗಿ ಕಾಣಲಾಗುವುದು ಎಂದು ಭರವಸೆ ನೀಡಿದ್ದೇನೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular