Sunday, September 8, 2024
Google search engine
Homeಮುಖಪುಟಮನೆಯಿಂದಲೇ ಮತದಾನ ಮಾಡಿದ ಹಿರಿಯ ನಾಗರಿಕರು

ಮನೆಯಿಂದಲೇ ಮತದಾನ ಮಾಡಿದ ಹಿರಿಯ ನಾಗರಿಕರು

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಏ. 26 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಈ ಅವಧಿಯ ಚುನಾವಣೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಲು ಆಗದಂತಹ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷಚೇತನರು ಮನೆಯಿಂದಲೇ ಮತದಾನ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಗರದ ಲೇಬರ್ ಕಾಲೋನಿಯಲ್ಲಿ ಹಿರಿಯ ಮತದಾರರು ಮತದಾನ ಮಾಡಿದರು.

ತುಮಕೂರಿನ ಲೇಬರ್ ಕಾಲೋನಿಯ ನಿವಾಸಿಗಳು ಹಾಗೂ ಹಿರಿಯ ನಾಗರಿಕರರಾದ ಶಾಂತಕುಮಾರಿ ಮತ್ತು ವೆಳ್ಳಿಯಮ್ಮ ತಮ್ಮ ಮನೆಯಲ್ಲೇ ಮತದಾನ ಮಾಡುವ ಮೂಲಕ ಲೋಕಸಭಾ ಚುನಾವಣೆಯ ಮತದಾನಕ್ಕೆ ಚಾಲನೆ ನೀಡಿದರು.

ಮನೆಯಿಂದ ಮತದಾನ ಮಾಡಿದ ಶಾಂತಕುಮಾರಿ ಮತ್ತು ವೆಳ್ಳಿಯಮ್ಮ ಅವರು ಸಂತಸ ವ್ಯಕ್ತಪಡಿಸಿದ್ದು, ನಮಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಚುನಾವಣಾ ಆಯೋಗ ಈ ರೀತಿಯ ವ್ಯವಸ್ಥೆ ಮಾಡಿರುವುದು ನಮಗೆ ತುಂಬಾ ಖುಷಿ ತಂದಿದೆ. ಇಂದು ಅಧಿಕಾರಿಗಳು ನಮ್ಮ ಮನೆಗೆ ಬಂದು ನಾವು ಮತದಾನ ಮಾಡಲು ಅನುವು ಮಾಡಿಕೊಟ್ಟಿದ್ದಾರೆ. ಮನೆಯಿಂದಲೇ ಮತದಾನ ಮಾಡಿರುವುದು ನಮಗೆ ತುಂಬಾ ಖುಷಿ ಕೊಟ್ಟಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಬಿ.ವಿ. ಅಶ್ವಿಜಾ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಮನೆಯಿಂದಲೇ ಮತದಾನ ಮಾಡವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ಹೋಮ್ ವೋಟಿಂಗ್ ಆರಂಭವಾಗಿದ್ದು, ಏ. 18ರವರೆಗೆ ನಡೆಯಲಿದೆ. ಹಿರಿಯ ಮತದಾರರು ಹಾಗೂ ಶೇ. 40 ರಷ್ಟು ಅಂಗವೈಕಲ್ಯ ಹೊಂದಿರುವವರಿಗೆ ಮನೆಯಿಂದಲೇ ಮತದಾನ ಮಾಡಲು ಫಾರಂ 12 ರ ಮೂಲಕ ಅವಕಾಶ ಮಾಡಿಕೊಟ್ಟಿದ್ದೆವು. ಅದರಲ್ಲಿ 43 ವಿಶೇಷ ಚೇತನ ಮತದಾರರು ಹಾಗೂ 85 ವರ್ಷ ಮೇಲ್ಪಟ್ಟ 337 ಮತದಾರರು ಸೇರಿ ಒಟ್ಟು 380 ಮತದಾರರು ಮನೆಯಿಂದಲೇ ಮತದಾನ ಮಾಡುತ್ತಿದ್ದಾರೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular