ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಬಾಗಿಲುಮನೆ ಸಿದ್ದರಾಮಣ್ಣ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಸಾಲ್ಕಟ್ಟೆ ಕ್ರಾಸ್ ಬಳಿ ನಡೆದಿದೆ. ಮೃತ ಸಿದ್ದರಾಮಣ್ಣ ಕಂದಿಕೆರೆಯಲ್ಲಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಸಿದ್ದರಾಮಣ್ಣ ಪ್ರಸ್ತುತ ತಿಪಟೂರಿನಲ್ಲಿ ವಾಸವಾಗಿದ್ದಾರೆ. ಮೃತರು ಇತ್ತೀಚಗಷ್ಟೇ ಚಿಕ್ಕನಾಯಕನಹಳ್ಳಿ ತಾಲ್ಲೂಕು ಪಂಚಾಯಿತಿಯಲ್ಲಿ ಪ್ರಭಾರ ಎಡಿಯಾಗಿ ಅಧಿಕಾರವಹಿಸಿಕೊಂಡಿದ್ದರು ಎಂದು ಹೇಳಲಾಗಿದೆ.
ಕಂದಿಕೆರೆ ಗ್ರಾಮ ಪಂಚಾಯಿತಿಗೆ ಕೆಲಸಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹೊಸದುರ್ಗದಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ದ್ವಿಚಕ್ರ ವಾಹನಕ್ಕೆ ಗುದ್ದಿ ಈ ದುರ್ಘಟನೆ ಸಂಭವಿಸಿದೆ.