Friday, November 22, 2024
Google search engine
Homeಮುಖಪುಟಬೆಂಕಿ ಬಿದ್ದು 10ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ

ಬೆಂಕಿ ಬಿದ್ದು 10ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ

ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಹತ್ತಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ಸುಮಾರು 5 ಗುಡಿಸಲಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಪೈಕಿ ಎರಡಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್‌ಗಳು ಸ್ಪೋಟಗೊಂಡಿದ್ದು, ಗುಡಿಸಲಿನಲ್ಲಿದ್ದ ಜನರು ಮತದಾನ ಮಾಡಲು ಮತಗಟ್ಟೆಗೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿಯಾಗದೇ ಭಾರೀ ಅನಾಹುತ ತಪ್ಪಿದಂತಾಗಿದೆ.

ಗುಡಿಸಲಿಗೆ ಬಿದ್ದ ಬೆಂಕಿ ಕಾರಣ ಅಪಾರ ದಾಸ್ತಾನು ಬಟ್ಟೆ ಸಣ್ಣ ಪುಟ್ಟ ವಸ್ತುಗಳು ಸೇರಿದಂತೆ ಗುಡಿಸಲುಗಳಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಇದರಿಂದ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿತ್ತು.

ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಚಿಂಪುಗಾನ ಹಳ್ಳಿಯಲ್ಲಿ ದುರ್ಘಟನೆ ನಡೆದಿದೆ, ಸುಮಾರು ವರ್ಷಗಳಿಂದ ಖಾಲಿ ನಿವೇಶನಕ್ಕಾಗಿ ಗುಡಿಸಲು ಹಾಕಿಕೊಂಡಿದ್ದ ಸ್ಥಳದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಗುಡಿಸಲು ಸುಟ್ಟು ಭಸ್ಮವಾಗಿವೆ.

ಗೃಹ ಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಂಪುಗಾನಹಳ್ಳಿಯಲ್ಲಿ ನಡೆದ ಘಟನೆ ನಡೆದಿದ್ದು ಈ ಹಿಂದೆಯೂ ಸಿಲಿಂಡರ್ ಸ್ಪೋಟಗೊಂಡು ಅನೇಕ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದ ಸ್ಥಳದಲ್ಲಿ ಮತ್ತೆ ನಡೆದ ದುರ್ಘಟನೆ ಸಂಭವಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular