ಲೈಂಗಿಕ ಹಗರಣದಲ್ಲಿ ಸಿಲುಕಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಹಿನ್ನೆಲೆಯಲ್ಲಿ ಹಾಲಿ ಸಂಸದ ಹಾಗೂ ಹಾಸನದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲಾಗಿದೆ.
ಕಳೆದ ನಾಲ್ಕು-ಐದು ದಿನಗಳಿಂದ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆನ್ನಲಾದ ಲೈಂಗಿಕ ಹಗರಣದ ಪೆನ್ ಡ್ರೈವ್ ಬಾರೀ ಸದ್ದು ಮಾಡಿತ್ತು. ರಾಜ್ಯದೆಲ್ಲೆಡೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.
ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಲೈಂಗಿಕ ಹಗರಣದ ಕುರಿತು ಮಾತನಾಡಿ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದ್ದರು. ಪ್ರಜ್ವಲ್ ರೇವಣ್ಣಗೂ ಮತ್ತು ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ ಒಂದು ದಿನದಲ್ಲೇ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿದ್ದಾರೆ.
ಏಪ್ರಿಲ್ 30ರಂದು ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು ಎಚ್.ಡಿ.ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಲೈಂಗಿಕ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಅವರನ್ನು ಒಂದನೇ ಆರೋಪಿಯನ್ನಾಗಿ ಹಾಗೂ ಪ್ರಜ್ವಲ್ ರೇವಣ್ಣ ಅವನ್ನು 2ನೇ ಆರೋಪಿಯನ್ನಾಗಿ ಎಫ್ಐಆರ್ ದಾಖಲಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳುವರೇ ನೋಡಬೇಕು.