ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕ್ರಮ ಕೈಗೊಳ್ಳುವಂತೆ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಎಸ್.ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ. ಆದರೆ ಬಂದಿಲ್ಲ. ಹೀಗಾಗಿ ಲುಕ್ ಔಟ್ ನೋಟೀಸ್ ನೀಡಲಾಗಿದೆ ಎಂದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ ಎಸ್.ಐ.ಟಿ ವಿಚಾರಣೆಗೆ ಹಾಜರಾಗದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.