ಮಹಿಳೆಯೊಬ್ಬರ ಕಿಡ್ನಾಪ್ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯದ ವಜಾ ಮಾಡಿರುವ ಹಿನ್ನೆಲೆಯಲ್ಲಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ವಜಾ ಮಾಡಿದೆ. ಹೀಗಾಗಿ ರೇವಣ್ಣ ಬಂಧನವಾಗಲಿದೆ.
ಇಂದು ಕಿಡ್ನಾಪ್ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಉಭಯ ಪಕ್ಷಗಾರರ ವಾದವನ್ನು ಆಲಿಸಿ ಆದೇಶವನ್ನು ಕಾಯ್ದಿರಿಸಿದ್ದರು.
ಮೇ 4ರಂದು ಸಂಜೆ ಆದೇಶವನ್ನು ಓದಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ರೇವಣ್ಣ ಪರ ವಕೀಲರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಹೀಗಾಗಿ ರೇವಣ್ಣ ಅವರನ್ನು ಯಾವುದೇ ಕ್ಷಣದಲ್ಲಾದರೂ ಬಂಧಿಸಬಹುದಾಗಿದೆ.