Thursday, May 30, 2024
Google search engine
Homeಮುಖಪುಟಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ - ಸ್ಥಳದಲ್ಲೇ ಇಬ್ಬರು ಶಿಕ್ಷಕರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಸ್ಥಳದಲ್ಲೇ ಇಬ್ಬರು ಶಿಕ್ಷಕರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿದ್ದು ಸ್ಥಳದಲ್ಲೇ ಇಬ್ಬರು ಶಿಕ್ಷಕರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಣಿವೇನಹಳ್ಳಿ ಗೇಟ್ ಬಳಿ ನಡೆದಿದೆ.

ತುಮಕೂರು ಜಿಲ್ಲಾ ಕೇಂದ್ರದಲ್ಲಿ ಮದುವೆಯ ಆರತಕ್ಷತೆ ಕಾರ್ಯಕ್ರಮ ಮುಗಿಸಿಕೊಂಡು ಪಾವಗಡಕ್ಕೆ ವಾಪಸ್ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಪಾವಗಡ ಸರ್ಕಾರಿ ಜೂನಿಯರ್ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲ 58 ವರ್ಷದ ಓ.ಧನಂಜಯ ಮತ್ತು ಪಾವಗಡ ತಾಲೂಕು ಗೌಡೇಟಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ 49 ವರ್ಷದ ಶ್ರೀಕೃಷ್ಣ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಶಿಕ್ಷಕರುಗಳಾದ ನರಸಿಂಹ ಮತ್ತು ವೆಂಕಟಾಚಲಪತಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments