Friday, November 22, 2024
Google search engine
Homeಮುಖಪುಟಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ - ಸಿಎಂ ಸಿದ್ದರಾಮಯ್ಯ

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ – ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಬಗ್ಗೆ ಈಗಾಗಲೇ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗುತ್ತದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರು ಚುನಾವಣೋತ್ತರ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ, ಇದು ವಾಸ್ತವ. ಆದರೆ ಸಮೀಕ್ಷಾ ವರದಿ ಇದಕ್ಕೆ ವ್ಯತಿರಿಕ್ತವಾಗಿದೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular