ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಚನ್ನೇನಹಳ್ಳಿ ಗ್ರಾಮದ ಜಾತ್ರಯಲ್ಲಿ ಕಲುಷಿತ ನೀರು ಕುಡಿದು ಮೂವರು ಮೃತಪಟ್ಟದ್ದು, ಅವರಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ತುಮಕೂರಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕುಲುಷಿತ ನೀರು ಕುಡಿದು ಸಾವನ್ನಪಿರುವವರ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವರು, ಮತ್ತಷ್ಟು ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಮೃತಪಟ್ಟಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಮಾಹಿತಿಯನ್ನು ತರಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಧುಗಿರಿಯಲ್ಲಿ ಒಬ್ಬರು ಹಾಗೂ ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಇಬ್ಬರು ಜೂ.12ರಂದು ಮೃತ ಪಟ್ಟಿದ್ದರು. ಮೃತರಲ್ಲಿ ವಯೋವೃದ್ಧರಾದ ಚಿಕ್ಕದಾಸಣ್ಞ ಮತ್ತು ಪೆದ್ದಣ್ಣ ಮೃತಪಟ್ಟಿದ್ದಾರೆ. ಓರ್ವ ಮೂರು ವರ್ಷದ ಬಾಲಕಿಯೂ ಸಾವನ್ನಪ್ಪಿದೆ ಎಂದರು.
ಖಾಸಗಿ ಆಸ್ಪತ್ರೆ ಮತ್ತು ಬೆಂಗಳೂರಿನಲ್ಲಿ ಮೃತಟಪಟ್ಟವರ ಬಗ್ಗೆ ನಿಖರ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ತರಿಸಿಕೊಳ್ಳುವುದಾಗಿ ಹೇಳಿದ್ದಾರೆ. ಜಿಲ್ಲಾಡಳಿತ ದಿಂದ ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ಜೊತೆ ಪರಿಹಾರ ಒದಗಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಆಶೋಕ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಇದ್ದರು.