Thursday, December 5, 2024
Google search engine
Homeಮುಖಪುಟರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಕ್ರಮ - ಸಚಿವ ಸೋಮಣ್ಣ

ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಕ್ರಮ – ಸಚಿವ ಸೋಮಣ್ಣ

ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿರುವ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರಗಳಲ್ಲಿರುವ ರೈಲ್ವೆ ನಿಲ್ದಾಣಗಳಂತೆ ತಾಲ್ಲೂಕು ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತು ನೀಡಲಾಗುವುದು. ಈಗಾಗಲೇ ತುಮಕೂರು ರೈಲ್ವೆ ನಿಲ್ದಾಣವನ್ನು 100 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ ಎಂದರು.

ರಾಜ್ಯದಲ್ಲಿ 7 ನಿಲ್ದಾಣಗಳನ್ನು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿನ ರೈಲ್ವೆ ನಿಲ್ದಾಣಗಳ ಆಧುನೀಕರಣ, ಟಿಕೆಟ್ ನೀಡುವ ವ್ಯವಸ್ಥೆ, ವಿಶ್ರಾಂತಿ ಕೊಠಡಿ ಹಾಗೂ ಪ್ರಯಾಣಿಕರಿಗೆ ರೈಲು ಬಾರದೆ ಸಮಸ್ಯೆ ಉಂಟಾದಾಗ ಆ ಸಮಸ್ಯೆಯನ್ನು ಬಗೆಹರಿಸಲು ಸಹ ವ್ಯವಸ್ಥೆ ಮಾಡುವ ಚಿಂತನೆ ಇದೆ ಎಂದು ಹೇಳಿದರು.

2026ರ ಡಿಸೆಂಬರ್ ಒಳಗೆ ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲು ಯೋಜನೆಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು. 600 ಕೋಟಿ ರೂ. ವೆಚ್ಚದಲ್ಲಿ ತುಮಕೂರು-ಚಿತ್ರದುರ್ಗ ರೈಲ್ವೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ ತುಮಕೂರು ರಾಯದುರ್ಗ, ತುಮಕೂರು ದಾವಣಗೆರೆ ರೈಲ್ವೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿರುವ ಹಂತದಲ್ಲಿದೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇನ್ನು 65 ಎಕರೆ ಮಾತ್ರ ಭೂಸ್ವಾಧೀನ ಆಗಬೇಕಿದೆ. ಹಾಗೆಯೇ ದಾವಣಗೆರೆಯಲ್ಲಿ 15 ಎಕರೆ ಹೊರತುಪಡಿಸಿ ಉಳಿದ ಎಲ್ಲ ಭೂಮಿ ಸ್ವಾಧೀನವಾಗಿದೆ ಎಂದು ತಿಳಿಸಿದರು.

ರಾಜ್ಯ ಸೇರಿದಂತೆ ದೇಶಾದ್ಯಂತ ನೆನೆಗುದಿಗೆ ಬಿದ್ದಿರುವ ರೈಲ್ವೆ ಕೆಳಸೇತುವೆಗಳು ಹಾಗೂ ಮೇಲ್ಸೇತುವೆ ಕಾಮಗಾರಿಗಳ ಚುರುಕಿಗೆ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಬಜೆಟ್‌ನಲ್ಲೂ ಪ್ರಸ್ತಾಪ ಮಾಡಲು ರೈಲ್ವೆ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ದಕ್ಷಿಣ ಏಷ್ಯಾದಲ್ಲೇ ಡಾಬಸ್‌ಪೇಟೆ ಮತ್ತು ವಸಂತನರಸಾಪುರ ಕೈಗಾರಿಕಾ ಕಾರಿಡಾರ್ ಗಮನಾರ್ಹವಾಗಿದೆ. ಇಲ್ಲಿನ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾವನೆಯೂ ಇದೆ. ಆದರೆ ಈ ನಡುವೆ ತಮಿಳುನಾಡಿನವರು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular