Sunday, September 8, 2024
Google search engine
Homeಜಿಲ್ಲೆತುಮಕೂರು ಪಾಲಿಕೆ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದ ನಾಗರಿಕರು

ತುಮಕೂರು ಪಾಲಿಕೆ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದ ನಾಗರಿಕರು

ತುಮಕೂರು ಮಹಾನಗರ ಪಾಲಿಕೆ ವತಿಯಿಂದ ನಗರದ 25, 26 ಹಾಗೂ 27ನೇ ವಾರ್ಡ್ ವ್ಯಾಪ್ತಿಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಲು ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರು ಹಲವು ದೂರುಗಳನ್ನು ಅಧಿಕಾರಿಗಳ ಮುಂದಿಟ್ಟರು.

ನಗರದ 26ನೇ ವಾರ್ಡ್ ವ್ಯಾಪ್ತಿಯ ದೋಬಿಘಾಟ್‌ನಲ್ಲಿರುವ ಚಂದ್ರಶೇಖರ್ ಆಜಾದ್ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಪಾಲಿಕೆಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಮೂರು ವಾರ್ಡ್ ಗಳ ನಾಗರಿಕರು ತಮ್ಮ ತಮ್ಮ ವಾರ್ಡ್ಗಳಲ್ಲಿರುವ ಸಮಸ್ಯೆಗಳನ್ನು ಅನಾವರಣಗೊಳಿಸಿದರು.

ವಾರ್ಡ್ ಗಳಲ್ಲಿ ಬೀದಿ ನಾಯಿಗಳ ಹಾವಳಿ, ಕುಡಿಯುವ ನೀರಿನ ಸಮಸ್ಯೆ, ಯುಜಿಡಿ, ಚರಂಡಿ ಸಮಸ್ಯೆ, ರಸ್ತೆ ಸಮಸ್ಯೆ, ಬೀದಿ ದೀಪ ಸಮಸ್ಯೆ ಸೇರಿದಂತೆ ಅಗತ್ಯ ಮೂಲಭೂತ ಸಮಸ್ಯೆಗಳ ಬಗ್ಗೆ ನಾಗರಿಕರು ಶಾಸಕರು ಹಾಗೂ ಪಾಲಿಕೆ ಆಯುಕ್ತರ ಗಮನ ಸೆಳೆದು ತಮ್ಮ ಅಹವಾಲು ಸಲ್ಲಿಸಿದರು.

ಎಸ್.ಎಸ್.ಪುರಂನ ಕೆಂಪಣ್ಣ ಅಂಗಡಿ ಸರ್ಕಲ್, ತುಮಕೂರು ವಿಶ್ವವಿದ್ಯಾನಿಲಯದ ಮುಂಭಾಗ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು, ಸಾರ್ವಜನಿಕರ ಸುಗಮ ಓಡಾಟಕ್ಕೆ ತೊಂದರೆಯಾಗುತ್ತಿದೆ. ಈ ಜಾಗಗಳಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆಯೂ ನಾಗರಿಕರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜ್ಯೋತಿಗಣೇಶ್, ಸರ್ಕಾರದಿಂದ ದೊಡ್ಡ ಮಟ್ಟದ ಅನುದಾನ ಬರುವವರೆಗೂ ನಾಗರಿಕರು ಸಹಕರಿಸಬೇಕು. ವಾರ್ಡ್ ಗಳ ಸಮಸ್ಯೆಗಳಿಗೆ ಪಾಲಿಕೆ ಹಾಗೂ ತಾವು ಕೈಲಾದಷ್ಟು ಮಟ್ಟಿಗೆ ಸ್ಪಂದಿಸುತ್ತೇವೆ. ಈಗಾಗಲೇ ಕೋಟ್ಯಂತರ ರೂ. ವಿನಿಯೋಗಿಸಿ ಪ್ರಗತಿಯಲ್ಲಿರುವ 24*7 ಕುಡಿಯುವ ನೀರಿನ ವ್ಯವಸ್ಥೆ ಇನ್ನು ಸಂಪೂರ್ಣಗೊಂಡಿಲ್ಲ. ಹಾಗಾಗಿ ಸಮಸ್ಯೆ ಎದುರಾಗುತ್ತಿದೆ. ಈ ಯೋಜನೆ ಸಂಪೂರ್ಣಗೊಳ್ಳಬೇಕಾದರೆ ಸುಮಾರು 60 ಕೋಟಿ ರೂಗಳಿಗೂ ಅಧಿಕ ಹಣ ಅಗತ್ಯವಿದೆ. ಹಾಗಾಗಿ ಪಾಲಿಕೆ ಮತ್ತು ಸರ್ಕಾರದಿಂದ ಸಾಧ್ಯವಾದಷ್ಟು ಮಟ್ಟಿಗೆ ಈ ಯೋಜನೆ ಪೂರ್ಣಗೊಳಿಸಲು ಪ್ರಯತ್ನಿಸುತ್ತೇವೆ ಎಂದರು.

ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ ಮಾತನಾಡಿ, ವಾರ್ಡ್ ಗಲ್ಲಿ ಚರಂಡಿಗಳ ಸ್ವಚ್ಚತೆ ಕಾಪಾಡಲಾಗುತ್ತಿದೆ. ಜತೆಗೆ ಫಾಗಿಂಗ್ ವ್ಯವಸ್ಥೆ ಸಹ ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ಪಾಲಿಕೆ ಮಾಜಿ ಸದಸ್ಯ ಮಲ್ಲಿಕಾರ್ಜುನ್, ಉಪಆಯುಕ್ತ ರುದ್ರಮುನಿ, ಗಿರೀಶ್, ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ವಿನಯ್, ಸಂದೀಪ್, ಆರೋಗ್ಯಾಧಿಕಾರಿ ಡಾ. ವೀರೇಶ್ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular