Saturday, July 20, 2024
Google search engine
Homeಜಿಲ್ಲೆಬಾಯ್ಲರ್ ಸ್ಫೋಟ - ಕಾರ್ಮಿಕನಿಗೆ ಗಂಭೀರ ಗಾಯ

ಬಾಯ್ಲರ್ ಸ್ಫೋಟ – ಕಾರ್ಮಿಕನಿಗೆ ಗಂಭೀರ ಗಾಯ

ಮಿಲ್ಕ್ ಡೈರಿಯ ಬಾಯ್ಲರ್ ಸ್ಟೋಟಗೊಂಡ ಪರಿಣಾಮ ಬಡ ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡಿದ್ದುಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.

ಕೊರಟಗೆರೆ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ವಾಸದ ಮನೆಯಲ್ಲಿ ಶ್ರೀಕಂಠೇಶ್ವರ ಮಿಲ್ಕ್ ಡೈರಿ ಹೆಸರಿನ ಪುಣ್ಯಕೋಟಿ ಮಜ್ಜಿಗೆಯ ಅತಿ ಸಣ್ಣ ಕೈಗಾರಿಕೆಯಲ್ಲಿ ಈ ಘಟನೆ ಸಂಭವಿಸಿದೆ. ಸದಾಶಿವಯ್ಯ ಎಂಬುವರಿಗೆ ಸೇರಿದ ಮನೆಯಲ್ಲಿ ಹಾಲಿನ ಉತ್ಪನ್ನಗಳ ತಯಾರಿಕೆಗೆ ಬಾಯ್ಲರ್‌ನ್ನು ಸಹ ಬಳಸಲಾಗುತ್ತಿತ್ತು ಎಂದು ಹೇಳಲಾಗಿದೆ.

ಮಂಗಳವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು ತಾಲೂಕಿನ ಮಲ್ಲೇಶಪುರ ಗ್ರಾಮದ ಯೋಗೀಶ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ.

ಶ್ರೀಕಂಠೇಶ್ವರ ಮಿಲ್ಕ್ ಡೈರಿಯು ವಾಸದ ಮೆನೆಯಲ್ಲೇ ನಡೆಸಲಾಗುತ್ತಿತ್ತು. ಬಾಯ್ಲರ್ ಇದ್ದ ಜಾಗ ಅತ್ಯಂತ ಕಿರಿದಾದ ಕೋಣೆಯಲ್ಲಿ ಇದ್ದುದರಿಂದ ಈ ಸ್ಟೋಟ ಸಂಭವಿಸಿದ್ದು ಕಾರ್ಮಿಕನಿಗೆ ಹೆಚ್ಚು ಹಾನಿಯಾಗಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಡಿವೈಎಸ್‌ಪಿ ರಾಮಚಂದ್ರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular