ಮುಖ್ಯಪೇದೆಯೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತ ಮುಖ್ಯಪೇದೆಯನ್ನು ಶಿವಪ್ರಕಾಶ್ ಆರಾಧ್ಯ ಎಂದು ತಿಳಿದು ಬಂದಿದೆ.
55 ವರ್ಷದ ಶಿವಪ್ರಕಾಶ್ ಆರಾಧ್ಯ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಮುಖ್ಯಪೇದೆ ಶಿವಪ್ರಕಾಶ್ ಆರಾಧ್ಯ ಪತ್ನಿ ಮತ್ತು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.
ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮತ್ತು ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.