ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬಜೆಟ್ ಮಂಡಿಸಿದ್ದು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದ್ದಾರೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಒದಗಿಸಲು ಒತ್ತು ನೀಡಲಾಗಿದೆ.
ಬಜೆಟ್ ಮುಖ್ಯಾಂಶಗಳು
ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತು ನೀಡಿದ್ದು, ತರಕಾರಿ ಬೆಳೆಗಳ ಉತ್ತೇಜನಕ್ಕಾಗಿ ರೈತರಿಗೆ ಸಹಾಯ ನೀಡಲು ಮತ್ತು ತರಕಾರಿ ಬೆಳೆಗಳ ಸಂಗ್ರಹಕ್ಕಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಬಜೆಟ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ವ್ಯವಸ್ಥೆ – ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ
ಗ್ರಾಮೀಣ ಭಾಗದಲ್ಲಿ ಆರ್ಥಿಕತೆ ಹೆಚ್ಚಳಕ್ಕೆ ಒತ್ತು – ಉದ್ಯೋಗ ಸೃಷ್ಟಿಗಾಗಿ ಮೂರು ಕೌಶಲ್ಯ ಜಾರಿ –
ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ – 10 ಲಕ್ಷದವರೆಗೂ ಸಾಲ ಸೌಲಭ್ಯ
ಕೈಗಾರಿಕೆಗಳ ಅಭಿವೃದ್ಧಿ ಮೂಲಕ ಆರ್ಥಿಕತೆಗೆ ಉತ್ತೇಜನ
26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ – ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣ ಮೆಡಿಕಲ್ ಕಾಲೇಜುಗಳ ಸ್ಥಾಪನೆ
ಎಸ್.ಸಿ, ಎಸ್ ಟಿ ಕುಶಲಕರ್ಮಿಗಳಿಗೆ ವಿಶೇಷ ಯೋಜನೆ
ಆಂದ್ರಪ್ರದೇಶ ಪುನರ್ ನಿರ್ಮಾಣ ಮನವಿಗೆ ಅಸ್ತು
ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಹೆಜ್ಜೆ – 12 ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆ ಘೋಷಣೆ
ಪಿಪಿಪಿ ಮಾದರಿಯಲ್ಲಿ ಬಾಡಿಗೆ ಮನೆಗಳನ್ನು ನಿರ್ಮಾಣ-ಕೈಗಾರಿಕಾ ನೌಕರರಿಗೆ ಡಾರ್ಮೆಂಟರಿ ರೀತಿ ಬಾಡಿಗೆ ಮನೆ
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಹೊಸ ಮನೆಗಳ ನಿರ್ಮಾಣಕ್ಕೆ ನಿರ್ಧಾರ
300 ಯೂನಿಟ್ ವರಗೆ ವಿದ್ಯುತ್ ಉಚಿತ ಬಳಕೆಗೆ ಅವಕಾಶ-ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ
ಸ್ಟ್ರೀಟ್ ಪುಡ್ ಹಬ್ ಗಳ ಅಭಿವೃದ್ದಿಗೆ ನಿರ್ಧಾರ -ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಒತ್ತು
ಮೂಲಸೌಕರ್ಯ ಅಭಿವೃದ್ಧಿಗೆ ಮುಂದಿನ 5 ವರ್ಷ ಆದ್ಯತೆ – ಮೂಲಸೌಕರ್ಯ ಅಭಿವೃದ್ಧಿಗೆ 11 ಲಕ್ಷ ಕೋಟಿ ಹೂಡಿಕೆ
ಆಸ್ತಿ ಖರೀದಿಯಲ್ಲಿ ಮಹಿಳೆಯರಿಗೆ ವಿಶೇಷ ಯೋಜನೆ
ಬಿಹಾರದಲ್ಲಿ ನೀರಾವರಿ ಅಭಿವೃದ್ಧಿಗೆ ನಿರ್ಧಾರ – ಬಿಹಾರದಲ್ಲಿ ಮಳೆಯಿಂದ ಪ್ರವಾಹ ನಿಯಂತ್ರಣಕ್ಕೆ ಕ್ರಮ
ಬಿಹಾರದಲ್ಲಿ ಪ್ರವಾಹ ಸಂತ್ರಸ್ತರಿಗೆ 11,500 ಕೋಟಿ ರೂ ನೆರವು
ಬೋಧಗಯಾದಲ್ಲಿ ಮಹಾಬೋಧಿ ದೇವಸ್ಥಾನ ಕಾರಿಡಾರ್-ಕಾಶಿ ವಿಶ್ವನಾಥ ದೇವಸ್ಥಾನ ಕಾರಿಡಾರ್ ಅಭಿವೃದ್ಧಿ
ವಿಶ್ವದರ್ಜೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಜ್ಜೆ – ಜಾಗತಿಕ ಪ್ರವಾಸೋದ್ಯಮ ಹಬ್ ಮಾಡಲು ಪ್ರಯತ್ನ
ಆದಾಯ ತೆರಿಗೆ
0-3 ಲಕ್ಷದವರೆಗೆ ತೆರಿಗೆ ಇಲ್ಲ
3-7 ಲಕ್ಷದವರೆಗೆ 5%ರಷ್ಟು ತೆರಿಗೆ
7-10 ಲಕ್ಷದವರೆಗೆ 10% ತೆರಿಗೆ
10-12 ಲಕ್ಷದವರೆಗೆ 15% ತೆರಿಗೆ
12-15 ಲಕ್ಷದವರೆಗೆ 20% ತೆರಿಗೆ
15 ಲಕ್ಷ ಮೇಲ್ಪಟ್ಟು 30% ತೆರಿಗೆ