Thursday, November 21, 2024
Google search engine
Homeಮುಖಪುಟರಾಮನಗರ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

ರಾಮನಗರ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಅನುಮೋದನೆ ಪಡೆದುಕೊಳ್ಳಲಾಗಿದೆ.

ಉಪನ್ಯಾಸಕ ವೃಂದದ ನೇರ ನೇಮಕಾತಿಗೆ ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ ಶೇ.50ರಷ್ಟು ಅಂಕಗಳನ್ನು ನಿಗದಿಪಡಿಸಲು ಒಪ್ಪಿಗೆ ನೀಡಲಾಗಿದೆ.

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013ರ ಅನ್ವಯ ಸ್ಥಾಪಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. 105 ಕೋಟಿ ರೂ ವೆಚ್ಚದಲ್ಲಿ 15 ವಿದ್ಯಾರ್ಥಿನಿಲಯಗಳ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿದೆ.

2017-2018ನೇ ಸಾಲಿನ ಗೆಜೆಟೆಡ್್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಆಭ್ಯರ್ಥಿಗಳಿಗೆ 2023-24ನೇ ಸಾಲಿನಲ್ಲೂ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಪ್ರಸ್ತಾವನೆಗೆ ಅನುಮೋದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಲೋಕ ಶಿಕ್ಷಣ ಟ್ರಸ್ಟ್ ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಲು 264 ಎಕರೆ ಜಮೀನನ್ನು ಹಂಚಿಕೆ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಮಂಡ್ಯ ಜಿಲ್ಲೆಯ ಕೆಆರ್,ಎಸ್ ನ ಕೆಳಭಾಗದಲ್ಲಿರುವ 198 ಎಕರೆ ಜಾಗದಲ್ಲಿ ಉದ್ಯಾನವನ ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಯನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಟೆಂಡರ್ ಕರೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕೃಷ್ಣರಾಜಸಾಗರ ಅಣೆಕಟ್ಟಿನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಗೆ ಉನ್ನತೀಕರಣಗೊಳಿಸುವ ಕಾಮಗಾರಿಗಳ ವಿಸ್ತೃತ ಯೋಜನಾ ವರದಿಯನ್ನು ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ.

ಪದವಿಪೂರ್ವ ಕಾಲೇಜು ಉಪನ್ಯಾಸಕರುಗಳ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇ.55ರಷ್ಟು ಅಂಕಗಳನ್ನು ನಿಗದಿಪಡಿಸಿರುವುದನ್ನು ಪರಿಷ್ಕರ್ಇಸಿ ಕನಿಷ್ಠ ಶೇ.50ರಷ್ಟು ಅಂಕಗಳನ್ನು ನಿಗದಿಪಡಿಸಲು ಒಪ್ಪಿಗೆ ನೀಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕೇದ್ರಿಕೃತ ದಾಖಲಾತಿ ಘಟಕ ಅಥವಾ ಕರ್ನಾಟಕ ಲೋಕಸೇವಾ ಆಯೋಗಗಳನ್ನು ಉಪನ್ಯಾಸಕರ ವೃಂದದ ಆಯ್ಕೆ ಪ್ರಾಧಿಕಾರವೆಂದು ನಿಗದಿಪಡಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular