Friday, November 22, 2024
Google search engine
Homeಮುಖಪುಟಬಿಜೆಪಿಯ 19 ಸಂಸದರ ಆಯ್ಕೆ ದುರಾದೃಷ್ಟಕರ

ಬಿಜೆಪಿಯ 19 ಸಂಸದರ ಆಯ್ಕೆ ದುರಾದೃಷ್ಟಕರ

ಕರ್ನಾಟಕಕ್ಕೆ ಕಾಂಗ್ರೆಸ್ ಸರ್ಕಾರ ಸಾಕಷ್ಟು ಕೊಡುಗೆ ನೀಡಿದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ನಯಾ ಪೈಸೆ ಕೊಡುಗೆ ನೀಡದಿದ್ದರೂ ದುರಾದೃಷ್ಟವಶಾತ್ 19 ಜನ ಸಂಸದರನ್ನು ನಮ್ಮ ಮತದಾರರು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಇದು ನಮ್ಮ ಜನರ ದುರಾದೃಷ್ಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಬಿಜೆಪಿ ಕೇಂದ್ರದಲ್ಲಿ ಯಾವತ್ತೇ ಅಧಿಕರಕ್ಕೆ ಬಂದರೂ ಕರ್ನಾಟಕಕ್ಕೆ ಅನ್ಯಾಯ ತಪ್ಪಿದ್ದಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರದಲ್ಲಿ ಇರಲಿ ಆಗಲೂ ಸಹ ಬಿಜೆಪಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ ಎಂದು ಲೇವಡಿ ಮಾಡಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದಾರೆ. ಕರ್ನಾಟಕದ ಮೇಲೆ ಕನಿಷ್ಠ ಕೃತಜ್ಞತೆಯು ಅವರಿಗಿಲ್ಲ. ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಿದ್ದೇನೆ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದೇನೆ ಎನ್ನುವ ಪರಿಜ್ಞಾನವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷದ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಮರೆತು ಹೋಗಿದ್ದಾರೆ. ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಗಾಳಿ ಮತ್ತು ಬೆಳಕನ್ನು ಹೊರತುಪಡಿಸಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಾಲು ಅಕ್ಕಿ, ಯಾವುದನ್ನು ಬಿಡಲಿಲ್ಲ ಎಲ್ಲದಕ್ಕೂ ಜಿಎಸ್‌ಟಿಯನ್ನು ಹೇಳಿ ಜನಸಾಮಾನ್ಯರ ರಕ್ತ ಹೀರುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ರಾಜ್ಯಗಳ ಮತ್ತು ದೇಶದ ಸಂಪತ್ತನ್ನು ಕೆಲವರಿಗೆ ಅದರಲ್ಲೂ ಅದಾನಿ ಅಂಬಾನಿ ಕಂಪನಿಗಳಿಗೆ ಲೂಟಿ ಮಾಡಲು ಸ್ವತಂತ್ರ ಕೊಟ್ಟಿದ್ದಾರೆ. ಗಣಿ ವಿಮಾನ ನಿಲ್ದಾಣ ರೈಲ್ವೆ ನಿಲ್ದಾಣ ರೈಲು ಜೊತೆಗೆ 25,000 ಕಿಲೋಮೀಟರ್ ನಷ್ಟು ಹೆದ್ದಾರಿಗಳನ್ನು ಖಾಸಗಿ ಅವರಿಗೆ ಬಿಜೆಪಿ ಸರ್ಕಾರ ಮಾರಿಕೊಂಡಿದೆ. 40,000 ಕಿಲೋಮೀಟರ್ ನಷ್ಟು ಉದ್ದದ ವಿದ್ಯುತ್ ಮಾರ್ಗಗಳನ್ನು ಖಾಸಗಿ ಅವರಿಗೆ ಕೊಟ್ಟಿದ್ದಾರೆ ಎಂದರು.

ಈ ಬಾರಿಯ ಮಧ್ಯಂತರ ಬಜೆಟ್ ಅಲ್ಲಿ ದೇಶದ ಅನೇಕ ರಾಜ್ಯಗಳಿಗೆ ನಯಾಪೈಸೆ ಅನುದಾನ ಕೊಟ್ಟಿಲ್ಲ. ಕೇವಲ ಆಂಧ್ರ ಮತ್ತು ಬಿಹಾರ್ ರಾಜ್ಯಗಳಿಗೆ ಸರ್ಕಾರ ರಚಿಸಲು ಸಹಾಯ ಮಾಡಿದರು ಎನ್ನುವ ಕಾರಣಕ್ಕೆ ಭರಪೂರ ಕೊಡುಗೆಗಳನ್ನು ಕೊಡಲಾಗಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular