Monday, September 16, 2024
Google search engine
Homeಮುಖಪುಟಸಿಪಿಎಂ ನಾಯಕ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಸಿಪಿಎಂ ನಾಯಕ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಸಿಪಿಎಂ ಪಕ್ಷದ ಪಾಲಿಟ್ ಬ್ಯೂರೋ ಸದಸ್ಯ ಹಾಗೂ ಪಶ್ವಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಯ ಅವರು ಗುರುವಾರ ಮುಂಜಾನೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಉಸಿರಾಟದ ತೊಂದರೆ ಮತ್ತು ನ್ಯೂಮೋನಿಯಾದಿಂದ ಬಳಲುತ್ತಿದ್ದ ಅವರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರು ಪತ್ನಿ ಮೀರಾ, ಪುತ್ರಿ ಸುಚೇತನ ಮತ್ತು ಅಪಾರ ಸಂಗಾತಿಗಳನ್ನು ಕಳೆದುಕೊಂಡಿದ್ದಾರೆ.

ಬುದ್ಧದೇವ್ ಭಟ್ಟಾಚಾರ್ಯ ಅವರು 2000 ರಿಂದ 2011ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದರು.

ಬುದ್ದದೇವ್ ಭಟ್ಟಾಚಾರ್ಯ ಅವರ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular