Wednesday, December 11, 2024
Google search engine
Homeಮುಖಪುಟಜಮೀನಿಗಾಗಿ ಮಗನಿಂದಲೇ ತಂದೆಯ ಹತ್ಯೆ

ಜಮೀನಿಗಾಗಿ ಮಗನಿಂದಲೇ ತಂದೆಯ ಹತ್ಯೆ

ಜಮೀನು ಮಾರಾಟ ಮಾಡಿದ್ದರಿಂದ ಬಂದ ಹಣವನ್ನು ಮಗಳಿಗೆ ನೀಡಿದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಬೀಕರವಾಗಿ ಕೊಚ್ಚಿ ಕೊಲೆಗೈದಿದರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು 75 ವರ್ಷದ ವೆಂಕಟಪ್ಪ ಎಂದು ಗುರುತಿಸಲಾಗಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಆಲಪನಹಳ್ಳಿ ಗ್ರಾಮದ ವೆಂಕಟಪ್ಪ ಮೂರುವರೆ ಎಕರೆ ಭೂಮಿಯನ್ನು ಹೊಂದಿದ್ದರು. ಇತ್ತೀಚೆಗೆ ತನ್ನ ಜಮೀನನ್ನು ಮಾರಾಟ ಮಾಡಿದ್ದರು. ಜಮೀನು ಮಾರಾಟದಿಂದ ಬಂದ 25 ಲಕ್ಷ ಹಣವನ್ನು ಮಗಳಿಗೆ ಕೊಟ್ಟಿದ್ದಕ್ಕೆ ಮಗ 45 ವರ್ಷದ ಸಿದ್ದಪ್ಪ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ವೆಂಕಟಪ್ಪ ತನ್ನ ಜಮೀನನ್ನು ಮಗಳ ಹೆಸರಿಗೆ ಬರೆದುಕೊಟ್ಟಿದ್ದರು ಎಂದು ಹೇಳಲಾಗಿದ್ದು ಇದರಿಂದ ಆತನ ಪುತ್ರ ಸಿದ್ದಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದ. ಜಮೀನನ್ನ ಮಗಳಿಗೆ ಬರೆದುಕೊಟ್ಟಿದ್ದಕ್ಕೆ ಮತ್ತು ಹಣವನ್ನು ನೀಡಿದ್ದಕ್ಕೆ ತಂದೆ ಮಗನ ನಡುವೆ ಗಲಾಟೆ ನಡೆದಿತ್ತು. ಹೀಗಾಗಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯಿತಿ ಕೂಡ ನಡೆದಿತ್ತು ಎಂದು ತಿಳಿದುಬಂದಿದೆ.

ಹಿರಿಯರ ಸಮ್ಮುಖದಲ್ಲಿ ನ್ಯಾಯ ಪಂಚಾಯಿತಿ ಮಾಡಿದರೂ ಕೂಡ ಮಗನಿಗೆ ಆಸ್ತಿ, ಹಣ ನೀಡಲು ತಂದೆ ವೆಂಕಟಪ್ಪ ಹಿಂದೇಟು ಹಾಕಿದ್ದರು. ಇದರಿಂದ ಬೇಸತ್ತ ಮಗ ಸಿದ್ದಪ್ಪ ತನ್ನ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಘಟನೆಯ ಹಿನ್ನೆಲೆಯಲ್ಲಿ ಎಎಸ್ಐ ಮರಿಯಪ್ಪ ಮತ್ತು ಕೋಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ತಂದೆಯನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿರುವ ಸಿದ್ದಪ್ಪನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular