ಮುಡಾ ಹಗರಣ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ದಾಖಲಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಎಸಿಎಸ್ ಗೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದಾರೆ.
ಇದೇ ವೇಳೆ ದೂರುದಾರರಾದ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಕುಮಾರ್ ಅವರಿಗೆ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ.
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಮೂವರು ಸಾಮಾಜಿಕ ಕಾರ್ಯಕರ್ತರು ರಾಜ್ಯಪಾಲರಿಗೆ ದೂರು ನೀಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.