Friday, November 22, 2024
Google search engine
Homeಮುಖಪುಟಪ್ರಾಸಿಕ್ಯೂಷನ್ ಗೆ ಅನುಮತಿ - ರಾಜ್ಯಪಾಲರಿಗೆ ಶೋಭೆ ತರುವುದಿಲ್ಲ

ಪ್ರಾಸಿಕ್ಯೂಷನ್ ಗೆ ಅನುಮತಿ – ರಾಜ್ಯಪಾಲರಿಗೆ ಶೋಭೆ ತರುವುದಿಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದು ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಎಚ್.ಡಿ.ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯೇ ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ ಎಂದು ಹೇಳಿದ್ದಾರೆ.

ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ ಕಡತವನ್ನು ಸಹ ಸುಮಾರು 2 ವರ್ಷಗಳಿಂದ ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ ಎಂದು ನೆನಪಿಸಿದ್ದಾರೆ.

ಮುರುಗೇಶ್ ನಿರಾಣಿ ಮಂತ್ರಿಯಾಗಿದ್ದಾಗ ಬೃಹತ್ ಕೈಗಾರಿಕೆ ಇಲಾಖೆ ವ್ಯಾಪ್ತಿಯಡಿ ಬರುವ ಮಾರ್ಕೆಟಿಂಗ್, ಜಾಹಿರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರ ನಡುವೆ ನಡೆದ ಅಕ್ರಮ ನೇಮಕಾತಿಯ ತನಿಖೆಗೆ ಅನುಮತಿ ಕೋರಿರುವ ಕಡತ ನಿದ್ರಾವಸ್ಥೆಯಲ್ಲಿದೆ ಎಂದು ಆರೋಪಿಸಿದ್ದಾರೆ.

ಜನಾರ್ಧನ್ ರೆಡ್ಡಿ ಗಣಿ ಹಗರಣದ ಕಡತ ರಾಜಭವನದಲ್ಲಿ ಧೂಳು ಹಿಡಿದಿದೆ. ಬಿಜೆಪಿ ಮತ್ತು ಮಿತ್ರಪಕ್ಷದ ಬಗೆದಷ್ಟು ಲೆಕ್ಕ ಹಾಕದಷ್ಟು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯನವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿ ಹೇಗಾದರೂ ಮಾಡಿ ಈ ಜನಪರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂದು ಹೊರಟಿರುವುದು ಕಾನೂನುಬಾಹಿರವಾಗಿದ್ದು, ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular