Thursday, November 21, 2024
Google search engine
Homeಮುಖಪುಟವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ-ಹತ್ಯೆ ಖಂಡಿಸಿ ಪ್ರತಿಭಟನೆ

ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ-ಹತ್ಯೆ ಖಂಡಿಸಿ ಪ್ರತಿಭಟನೆ

ಕೊಲ್ಕತ್ತಾದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಕಮ್ ವೃತ್ತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ-ಹತ್ಯೆಯನ್ನು ಖಂಡಿಸಿ ಎಐಡಿಎಸ್‌ಓ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೈಯಲ್ಲಿ ಮೋಂಬತ್ತಿ ಹಿಡಿದುಕೊಂಡು ತುಮಕೂರಿನ ಟೌನ್ ಹಾಲ್ ವೃತ್ತದಿಂದ ಸ್ವಾತಂತ್ರ‍್ಯ ಚೌಕದವರೆಗೆ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳಿಗೆ ಮಾದ್ಯಮಗಳಲ್ಲಿ ನಿರಂತರವಾಗಿ ಮತ್ತು ಅವ್ಯಾಹತವಾಗಿ ಅಶ್ಲೀಲತೆ ಮತ್ತು ಕ್ರೌರ್ಯಗಳ ಪ್ರದರ್ಶನ, ಇಂಟರ್‌ನೆಟ್, ಮೊಬೈಲ್‌ಗಳ ಮೂಲಕ ಪೋರ್ನೋಗ್ರಫಿಕ್ ವೆಬ್‌ಸೈಟ್‌ಗಳನ್ನು ಹರಿಬಿಡುತ್ತಿರುವುದು, ದುರಭ್ಯಾಸಗಳಿಗೆ ವ್ಯಸನಿಗಳನ್ನಾಗಿಸುತ್ತಿರುವುದು ಮೂಲ ಕಾರಣವಾಗಿವೆ ಎಂದು ಹೇಳಿದರು.
ಇದರಿಂದ ವಿಕೃತ ಮನಸ್ಥಿತಿ ಬೆಳೆಸಿಕೊಂಡು ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ಅತ್ಯಾಚಾರದಂತಹ ಹೀನ, ಅನಾಗರಿಕ, ಅಮಾನವೀಯ ಕೃತ್ಯವನ್ನು ಎಸಗುತ್ತಿದ್ದಾರೆ. ದೆಹಲಿಯ ನಿರ್ಭಯ ಪ್ರಕರಣದ ನಂತರ ನಡೆದ ಪ್ರಬಲ ಹೋರಾಟದ ಫಲವಾಗಿ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಗಟ್ಟಲು ವರ್ಮಾ ಆಯೋಗ ಹಲವಾರು ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರಗಳು ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮಕೈಗೊಂಡಿಲ್ಲ ಎಂದು ದೂರಿದರು.
ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಮಾತನಾಡಿ, ಸಂತ್ರಸ್ತೆಗೆ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆಗಳನ್ನು ಆಯೋಜಿಸುತ್ತಿರುವುದು ನಿರೀಕ್ಷಿತ ಮತ್ತು ನ್ಯಾಯ ಸಮ್ಮತವಾಗಿದೆ ಎಂದರು. ಸಾಮಾಜಘಾತುಕ ಶಕ್ತಿಗಳು ಈ ಘಟನೆಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಮತ್ತು ಪ್ರತಿಭಟನಾಕಾರರ ಮನಸ್ಸಿನಲ್ಲಿ ಭಯದ ಭಾವನೆಯನ್ನು ಹುಟ್ಟಿಸಲು ಆಗಸ್ಟ್ 14 ರಂದು ಮಧ್ಯರಾತ್ರಿ ಆರ್‌ಜಿಕಾರ್ ವೈದ್ಯಕೀಯ ಕಾಲೇಜಿಗೆ ನುಗ್ಗಿ ಪ್ರತಿಭಟನೆಯ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular