ಕೋವಿಡ್-19 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊಸ ನಿಯಮಾವಳಿಗಳನ್ನು ರೂಪಿಸಿದೆ. ಹೊರ ರಾಜ್ಯಗಳಿಂದ ಬರುವವರಿಗೆ ಕೊರೊನ ನೆಗೆಟೀವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಜಿಮ್ ಗಳಲ್ಲಿ ಶೇಕಡ 50ರಷ್ಟು ಮಂದಿಗೆ ಹೊಸ ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಿದೆ. ಈಜುಕೊಳಗಳನ್ನು ಬಳಸದಂತೆ ನಿರ್ಬಂಧ ಹೇರಿದೆ.
ಅಪಾರ್ಟ್ ಮೆಂಟ್ ಗಳಲ್ಲಿ ಕೊರೊನ ಸೋಂಕು ಹೆಚ್ಚುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಅಪಾರ್ಟ್ ಮೆಂಟ್ ಗಳಿಗೆ ಆರೋಗ್ಯ ಸಿಬ್ಬಂದಿ ಬಂದಾಗ ಜನರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
ಮಾರ್ಗಸೂಚಿ ಪಾಲಿಸದ ಅಪಾರ್ಟ್ ಮೆಂಟ್ ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರು ನೆಗೆಟೀವ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕ್ಲಬ್ ಮತ್ತು ಸಮುದಾಯ ಭವನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮತ್ತು ಕೊರಿಯರ್, ಡೆಲಿವರಿ ಮಾಡುವ ಹುಡುಗರು ಸೇವೆ ಕಡಿಮೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.