Monday, September 16, 2024
Google search engine
Homeಮುಖಪುಟಸಿದ್ದರಾಮಯ್ಯ ರಾಜಿನಾಮೆ ನೀಡಲಿ-ಮಾಜಿ ಸಿಎಂ ಸದಾನಂದಗೌಡ ಆಗ್ರಹ

ಸಿದ್ದರಾಮಯ್ಯ ರಾಜಿನಾಮೆ ನೀಡಲಿ-ಮಾಜಿ ಸಿಎಂ ಸದಾನಂದಗೌಡ ಆಗ್ರಹ

ರಾಜ್ಯಪಾಲರದ್ದು ಸಾಂವಿಧಾನಿಕ ಹುದ್ದೆ. ರಾಜ್ಯದ ಆಡಳಿತ ಯಂತ್ರ ಕುಸಿದಾಗ, ಖಜಾನೆ ಲೂಟಿಯಾದಾಗ, ಸಾರ್ವಜನಿಕ ಆಸ್ತಿಯನ್ನು ಸ್ವಾರ್ಥಕ್ಕೆ ಬಳಸಿಕೊಂಡಾಗ,ರಾಜ್ಯಪಾಲರು ಕಾನೂನಾತ್ಮಕ ಕಾರ್ಯಾಚರಣೆ ಮಾಡುತ್ತಾರೆ. ನಿಮ್ಮ ಕರ್ಮಕಾಂಡವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಒತ್ತಾಯಿಸಿದರು.

ತುಮಕೂರಿನಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್‌ನವರು ರಾಜ್ಯದಲ್ಲಿ ಹೀಗೇ ಅರಾಜಕತೆ ಪ್ರಾರಂಭ ಮಾಡಿದರೆ ಕೇಂದ್ರ ಸರ್ಕಾರ ಖಂಡಿತವಾಗಿಯೂ ಸಂಭವವಾದ ಕ್ರಮಕ್ಕೆ ಆಲೋಚನೆ ಮಾಡುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಏಕಾಏಕಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಿಲ್ಲ, ಅದಕ್ಕೂ ಮೊದಲು ಸರ್ಕಾರಕ್ಕೆ ನೋಟೀಸ್ ನೀಡಿ, ಪ್ರಕರಣದ ಬಗ್ಗೆ ಉತ್ತರ ನೀಡಲು ಹೇಳಿದ್ದರು. ಆದರೆ, ಡಿಸಿಎಂ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ನಲ್ಲಿ ರಾಜ್ಯಪಾಲರ ನೋಟೀಸ್ ಅನ್ನು ವಾಪಸ್ ಮಾಡಲು ತೀರ್ಮಾನ ಮಾಡಿತು. ರಾಜ್ಯಪಾಲರು ನಿಯಮಾನುಸಾರ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರು. ಸಿದ್ದರಾಮಯ್ಯನವರಿಗೆ ನೈತಿಕತೆಯಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಹೇಳಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ವಿಧಾನಪರಿಷತ್ ಸದಸ್ಯ ಚಿದಾನಂದಗೌಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿದರು.

ಬಿಜೆಪಿ ಕಾರ್ಯಕರ್ತರು ಟೌನ್‌ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ರಾಜ್ಯ ಬಿಜೆಪಿ ವಕ್ತಾರ ಹೆಚ್.ಎನ್.ಚಂದ್ರಶೇಖರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಂಗರಾಜು, ಸಂದೀಪ್‌ಗೌಡ, ಹಾಲೇಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಮೊದಲಾದವರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular