Thursday, November 21, 2024
Google search engine
Homeಮುಖಪುಟಕೊರೊನ, ತಜ್ಞರ ಸಲಹೆ ಪಡೆದು ಅಗತ್ಯ ಕ್ರಮ -ಸಿಎಂ

ಕೊರೊನ, ತಜ್ಞರ ಸಲಹೆ ಪಡೆದು ಅಗತ್ಯ ಕ್ರಮ -ಸಿಎಂ

ಕೊರೊನ ಸೋಂಕಿನಿಂದ ಜನರಿಗೆ ಮತ್ತು ಜನರ ಬದುಕಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜನರು ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೊವಿಡ್ ಒಂದನೇ ಮತ್ತು ಎರಡನೇ ಅಲೆಯ ಅನುಭವದಿಂದ ಈ ಬಾರಿ ಕೊರೊನ ನಿರ್ವಹಣೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಬೇಕೆಂಬ ಚಿಂತನೆ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಿವೆನ್ಷನ್ ಈಸ್ ಬೆಟರ್ ಎಂಬ ದೃಷ್ಟಿಯಿಂದ ಹಂತಹಂತವಾಗಿ ಸಂಪೂರ್ಣ ನಿಯಂತ್ರಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ತಜ್ಞರ ಸಲಹೆ ಪಡೆದುಕೊಂಡು ವೈಜ್ಞಾನಿಕವಾಗಿ ಚರ್ಚಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕೊರೊನ ಸೋಂಕು ಹರಡಬಾರದು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ ಆಚರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular