Thursday, October 10, 2024
Google search engine
Homeಮುಖಪುಟವಿಜಯೇಂದ್ರ ಹೇಳಿದ್ದಾರೆ ಎಂದು ರಾಜಿನಾಮೆ ನೀಡಲು ಸಾಧ್ಯವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ವಿಜಯೇಂದ್ರ ಹೇಳಿದ್ದಾರೆ ಎಂದು ರಾಜಿನಾಮೆ ನೀಡಲು ಸಾಧ್ಯವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಬಲವಿರುವ ನಮ್ಮ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದು ಹೇಳಿದ್ದಾರೆ.

ಬಿ.ವೈ. ವಿಜಯೇಂದ್ರ ಹೇಳಿದ್ದಾರೆ ಎಂದು ರಾಜೀನಾಮೆ ನೀಡಲು ಸಾಧ್ಯವೇ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಶಾಸಕರು, ಪರಿಷತ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜ್ ಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಸಿಗಬೇಕಿದೆ ಎಂದರು.

ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ಧವಿದೆ. ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular