ವಿವಾದಿ ಪೋಟೋ ಹಂಚಿಕೆಯ ಕಾರಣದಿಂದ ಕೆಲ ದಿನಗಳ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್ಟರ್ ಖಾತೆಯನ್ನು ಶನಿವಾರ ಅನ್ ಲಾಕ್ ಮಾಡಿದೆ. ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಟ್ವಿಟ್ಟರ್ ರಾಹುಲ್ ಗಾಂಧಿ ಅವರ ಖಾತೆಯನ್ನು ಮರುಚಾಲನೆ ಮಾಡಿದೆ.
ಈಶಾನ್ಯ ದೆಹಲಿಯಲ್ಲಿ 9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಈ ಚಿತ್ರವನ್ನು ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಲಾಗಿತ್ತು.
ಟ್ವಿಟ್ಟರ್ ವಿರುದ್ಧ ರಾಹುಲ್ ಗಾಂಧಿ ಗರಂ ಆಗಿದ್ದರು. ಯೂಟೂಬ್ ಮೂಲಕ ವಿಡಿಯೋ ಮಾಡಿ ಟ್ವಿಟ್ಟರ್ ಡೇಂಜರಸ್ ಗೇಮ್ ಎಂದು ಟೀಕಿಸಿರುವುದನ್ನು ಟ್ವಿಟ್ಟರ್ ಖಾತೆಯಲ್ಲೇ ಹಂಚಿಕೊಂಡಿದ್ದಾರೆ.
ತಮ್ಮ ನಾಯಕನ ಟ್ವಿಟ್ಟರ್ ಖಾತೆ ಸ್ಥಗಿತಗೊಳಿಸಿದ್ದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಟ್ವಿಟ್ಟರ್ ಖಾತೆಯನ್ನು ನಿರ್ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ, ಪ್ರಜಾಪ್ರಭುತ್ವ ಮೇಲೆ ದಾಳಿ. ಟ್ವಿಟ್ಟರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರದ ನಿಯಂತ್ರಣದಲ್ಲಿ ಎಂದು ಕಾಂಗ್ರೆಸ್ ಟೀಕಾಪ್ರಹಾರ ನಡೆಸಿತ್ತು.
ಅಷ್ಟೇ ಅಲ್ಲ ‘ಇದು ರಾಹುಲ್ ಗಾಂಧಿ ಮೇಲಿನ ದಾಳಿ ಮಾತ್ರವಲ್ಲ. 19-20 ಮಿಲಿಯನ್ ಬೆಂಬಲಿಗರಿರುವ ಖಾತೆಯನ್ನು ಸ್ಥಗಿತಗೊಳಿಸಿ ಅಭಿಪ್ರಾಯದ ಹಕ್ಕನ್ನು ಟ್ವಿಟ್ಟರ್ ನಿರಾಕರಿಸಿದೆ. ಏನು ಮಾಡುವುದು ಎಂದು ಪ್ರಶ್ನಿಸಿತ್ತು.