Thursday, October 10, 2024
Google search engine
Homeಮುಖಪುಟಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಹೇಳಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಮ್ಮ ಸರ್ಕಾರ ಶಿಸ್ತಿನ ಸರ್ಕಾರ. ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಉತ್ತಮ ಆಡಳಿತ ನೀಡುತ್ತಿದ್ದು, ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ನಾಯಕನ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಉತ್ತರಿಸಿದ ಸಚಿವರು, ಇದುವರೆಗೂ ಒಂದೇ ಒಂದು ಗೃಹಲಕ್ಷ್ಮೀ ಖಾತೆ ಡಿಲೀಟ್ ಆಗಿಲ್ಲ. ಜಿಎಸ್‌ಟಿ, ಆದಾಯ ತೆರಿಗೆ ಪಾವತಿ ಮಾಡುವ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯಡಿ ಸೌಲಭ್ಯ ನೀಡಲು ಅವಕಾಶವಿಲ್ಲ. ಆದ್ದರಿಂದ ನೋಂದಣಿ ಸಂದರ್ಭದಲ್ಲಿಯೇ ಅಂತಹವರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ನೋಂದಣಿಯಾದ ಬಳಿಕ ಡಿಲೀಟ್ ಮಾಡಲಾಗಿಲ್ಲ ಎಂದು ತಿಳಿಸಿದರು. ಎಲ್ಲಾ ಜಿಲ್ಲೆಗಳಿಗೂ ಗೃಹಲಕ್ಷ್ಮೀ ಖಾತೆಯ 11ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಶೀಘ್ರವೇ 12 ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುವುದೆಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಪಾವತಿ ವಿಳಂಬವಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಪಾವತಿ ಮಾಡಲಾಗುತ್ತಿದ್ದು, ವೇತನ ಪಾವತಿ ವಿಳಂಬ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ.

ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದಾಗ ರಾಜ್ಯ ಸರ್ಕಾರದ ಮೊತ್ತ ಸೇರಿಸಿ ವೇತನ ನೀಡಲಾಗುತ್ತಿದ್ದು, ಕೇಂದ್ರದಿಂದ ಹಣ ಇನ್ನೂ ಬಂದಿಲ್ಲದೆ ಇರುವುದರಿಂದ ವೇತನ ಪಾವತಿ ವಿಳಂಬವಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ವೇತನಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇಂದ್ರಕ್ಕೆ ಮರ‍್ನಾಲ್ಕು ಬಾರಿ ಪತ್ರ ಬರೆಯಲಾಗಿದೆ. ಗಣಪತಿ ಹಬ್ಬದೊಳಗೆ ವೇತನ ನೀಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular