Monday, December 23, 2024
Google search engine
Homeಜಿಲ್ಲೆವಿದ್ಯಾರ್ಥಿಗಳಿಗೆ ಸಮಾಜದ ಬಗ್ಗೆ ಕಾಳಜಿ ಮೂಡಿಸಿ

ವಿದ್ಯಾರ್ಥಿಗಳಿಗೆ ಸಮಾಜದ ಬಗ್ಗೆ ಕಾಳಜಿ ಮೂಡಿಸಿ

ವಿದ್ಯಾಭ್ಯಾಸದ ಜೊತೆಗೆ ಸಮಾಜದ ಬಗ್ಗೆ ಕಾಳಜಿ ಬರುವಂತೆ ಮಾಡುವ ಮಹತ್ತರವಾದ ಜವಾಬ್ದಾರಿ ಶಿಕ್ಷಕರುಗಳ ಮೇಲೆ ಇದ್ದು, ಇದರಿಂದ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಸೇವೆ ಸಲ್ಲಿಸಲು ಅನುಕೂಲವಾಗಲಿದೆ ಎಂದು ಇಂದಿರಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ರೀಟಾ ಶಿವಮೂರ್ತಿ ಅಭಿಪ್ರಾಯಪಟ್ಟರು

ತುಮಕೂರು ನಗರದ ಕನ್ನಡ ಭವನದಲ್ಲಿ ಇಂದಿರಾ ವಿದ್ಯಾಸಂಸ್ಥೆ ಮತ್ತು ನಾರಾಯಣ ಇ-ಟೆಕ್ನೊ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜದ ಬಗ್ಗೆ ಕಾಳಜಿವಹಿಸಬೇಕಾದರೆ ಶಿಕ್ಷಕರು ಪಠ್ಯಪುಸ್ತಕಗಳ ಜೊತೆಗೆ ಸಾಮಾಜಿಕ ಕಾಳಜಿ ಇರುವಂತಹ ವಿಚಾರಗಳನ್ನು, ದೇಶದ ಇತಿಹಾಸವನ್ನು ತಿಳಿಸುವ ಕೆಲಸಗಳನ್ನು ಮಾಡಬೇಕಾಗಿದೆ. ವಿದ್ಯಾರ್ಥಿಗಳು ಮನರಂಜನೆಯ ಜೊತೆ ಜೊತೆಗೆ ವಿಚಾರಗಳನ್ನು ತಿಳಿದುಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಮುಖ್ಯಅತಿಥಿಗಳಾಗಿ ಮಾತನಾಡಿದ ಸುಧೀರ್‌ಮೂರ್ತಿ, ಪೋಷಕರು ಮಕ್ಕಳ ಮೇಲೆ ಮಹತ್ತರವಾದ ಭರವಸೆಗಳೊಂದಿಗೆ ವಿದ್ಯಾಭ್ಯಾಸಕ್ಕೆ ಕಳುಹಿಸುತ್ತಾರೆ. ಅವರ ಆಶೋತ್ತರಗಳಿಗೆ ಪೂರಕವಾಗಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಅನಿತಾ ಸುಧೀರ್‌ಮೂರ್ತಿ, ಮಹೇಶ್‌ಕುಮಾರ್, ಯಶವಂತ, ಫಾತಿಮಾ ಹಾಗೂ ಅಶ್ವಿನಿ ಹಾಜರಿದ್ದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ನಾರಾಯಣ ಟೆಕ್ನೋ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರ್ಷಿತಲೋಕೇಶ್, ಉಪನ್ಯಾಸಕರುಗಳಿಗೆ ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular