Monday, December 23, 2024
Google search engine
Homeಮುಖಪುಟಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಸಿಎಂ ಚಾಲನೆ

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಸಿಎಂ ಚಾಲನೆ

ಎತ್ತಿನಹೊಳೆ ಎರಡನೇ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ. ಇದು ಎರಡು ಹಂತದ ಯೋಜನೆ. ಮೊದಲ ಹಂತ ಇಂದು ಉದ್ಘಾಟನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಕನಸಿನ ಕೂಸು, 7 ಜಿಲ್ಲೆಗಳ ಲಕ್ಷಾಂತರ ಜನರ ಬದುಕು ಬದಲಿಸುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎರಡನೇ ಹಂತ ಕೂಡ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳಿಗೆ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನೆಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ ಎಂದರು.

ಹೀಗಿದ್ದರೂ ಕೆಲವರು ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಮೂರ್ಖರನ್ನಾಗಿ ಮಾಡಲು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಸಲಹೆ ನೀಡಿದರು.

2014ರಲ್ಲಿ ಎತ್ತಿನಹೊಳೆಗೆ ಭೂಮಿಪೂಜೆ ನೇರವೇರಿಸಿದವನು ನಾನೇ. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀನಿ. ಕೆರೆಗಳನ್ನು ತುಂಬಿಸಿಯೇ ತುಂಬಿಸ್ತೇನೆ. ಇದು ಶತಸಿದ್ಧ ಎಂದು ಭರವಸೆ ನೀಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಎಂಬ ಸೂಚನೆಯನ್ನು ಇದೇ ವೇಳೆ ನೀಡುತ್ತಿದ್ದೇನೆ‌.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಈ ಯೋಜನೆಯಿಂದ ಲಕ್ಷಾಂತರ ಜನರ ಬದುಕು ಬದಲಾಗುವ ನಿರೀಕ್ಷೆಯಿದೆ ಎಂದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಶಾಸಕರು, ಚುನಾಯಿತ ಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular