Thursday, September 19, 2024
Google search engine
Homeಮುಖಪುಟಶಿರಾ ಗೇಟ್ ರಸ್ತೆ ಸಂಚಾರಕ್ಕೆ ಮುಕ್ತ

ಶಿರಾ ಗೇಟ್ ರಸ್ತೆ ಸಂಚಾರಕ್ಕೆ ಮುಕ್ತ

ಕಳೆದ ಐದು ತಿಂಗಳಿಂದ ಬಂದ್ ಮಾಡಲಾಗಿದ್ದ ತುಮಕೂರು ನಗರದ ಶಿರಾ ಗೇಟ್ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ತುಮಕೂರು ನಗರದ ಎಸ್.ಮಾಲ್ ಬಳಿ ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು 6.65 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪುನರ್ ನಿರ್ಮಿಸಿರುವ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಅಮಾನಿಕೆರೆ ಕೋಡಿ ನೀರು ಹರಿಯುವ ರಾಷ್ಟ್ರೀಯ ಹೆದ್ದಾರಿ 4ರ ಸೇತುವೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಸಾವುಗಳು ಸಂಭವಿಸುತ್ತಲೇ ಇದ್ದವು. ಕಿರಿದಾಗಿದ್ದ ಈ ಸೇತುವೆಯನ್ನು ಅಗಲೀಕರಣಗೊಳಿಸಿ, ಹೊಸ ಸೇತುವೆಯನ್ನು ನಿರ್ಮಿಸಬೇಕೆಂದು ಈ ಭಾಗದ ಜನರು, ಜನಪ್ರತಿನಿಧಿಗಳಿಂದ ಬಹು ದಿನಗಳ ಬೇಡಿಕೆಯಿತ್ತು ಎಂದರು.

ರಾಜ್ಯದ 15 ಜಿಲ್ಲೆ ಸೇರಿ ಜಿಲ್ಲೆಯ ಪಾವಗಡ, ಕೊರಟಗೆರೆ, ಶಿರಾ, ಮಧುಗಿರಿ ಭಾಗಕ್ಕೆ ಇದೇ ರಸ್ತೆಯಿಂದ ತೆರಳಬೇಕಿತ್ತು. ರಸ್ತೆ ಕಾಮಗಾರಿ ಕೈಗೊಂಡ ನಂತರ ವಾಹನಗಳು ಬಳಸಿಕೊಂಡು ಹನುಮಂತಪುರ ಮೂಲಕ ಸಾಗಬೇಕಿತ್ತು. ಈಗ ಸೇತುವೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡಿರುವುದರಿಂದ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು.

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು. ಹೃದ್ರೋಗ ಸಮಸ್ಯೆಯಿದ್ದವರು ತುಮಕೂರು ಜಿಲ್ಲೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತಲುಪಲು ಕನಿಷ್ಟ 2 ಗಂಟೆ ಬೇಕಾಗುತ್ತದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ಸಾವನ್ನಪ್ಪುವ ಸಾಧ್ಯತೆಯಿರುತ್ತದೆ. ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಕೇಂದ್ರ ನಿರ್ಮಿಸುವುದರಿಂದ ಜಿಲ್ಲೆಯ ಜನರಿಗೆ ಮಾತ್ರವಲ್ಲದೇ ಶಿವಮೊಗ್ಗ, ಹಾಸನ, ಚಿತ್ರದುರ್ಗ ಮುಂತಾದ ಜಿಲ್ಲೆಗಳ ಜನರಿಗೂ ಅನುಕೂಲವಾಗಲಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular