Friday, October 18, 2024
Google search engine
Homeಜಿಲ್ಲೆತುಮಕೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್-5 ದಿನಗಳಲ್ಲಿ ಭಾರೀ ಮಳೆ-ಡಿಸಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್-5 ದಿನಗಳಲ್ಲಿ ಭಾರೀ ಮಳೆ-ಡಿಸಿ ಶುಭ ಕಲ್ಯಾಣ್

ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.

ತುಮಕೂರಿನಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನದಿ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿದು ಸಾವು-ನೋವುಗಳು ಸಂಭವಿಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯ, ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.

ಕೆರೆ-ಕಟ್ಟೆ, ಏರಿ, ಬಂಡು, ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ ನಿಂತಿದ್ದಲ್ಲಿ ಮರಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಮಾರ್ಗ/ಕಂಬ ಬಿದ್ದಿದ್ದಲ್ಲಿ ಮನೆಯೊಳಗೆ ನೀರು ನುಗ್ಗಿದರೆ. ಮನೆಗೋಡೆ/ ಮೇಲ್ಚಾವಣಿ ಬಿದ್ದರೆ, ಬೆಳೆ ನಷ್ಟ ಮತ್ತಿತರ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816-2213400, 0816-155304 ಅಥವಾ ವಾಟ್ಸಪ್ ಸಂಖ್ಯೆ: 7304975519ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಚುಣಾವಣೆ ತಹಶೀಲ್ದಾರ್ ರೇಷ್ಮಾ, ತಹಶೀಲ್ದಾರಗಳಾದ ರಾಜೇಶ್ವರಿ, ವರದರಾಜು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular