Thursday, January 29, 2026
Google search engine
Homeಮುಖಪುಟಜಾತಿ ಪ್ರಮಾಣ ಪತ್ರದ ಕುರಿತು ಇರುವ ಗೊಂದಲ ನಿವಾರಣೆಗೆ ಕ್ರಮ-ಸಿಎಂ

ಜಾತಿ ಪ್ರಮಾಣ ಪತ್ರದ ಕುರಿತು ಇರುವ ಗೊಂದಲ ನಿವಾರಣೆಗೆ ಕ್ರಮ-ಸಿಎಂ

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನೆಲೆಯಲ್ಲಿ ನಿಗಮಕ್ಕೆ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದಕ್ಕೂ ಸಭೆ ಗಮನ ನೀಡಿದೆ ಎಂದು ಹೇಳಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ಐಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular