Thursday, October 17, 2024
Google search engine
Homeಜಿಲ್ಲೆತುಮಕೂರು ವಿವಿಯಲ್ಲಿ ವಾಲ್ಮಿಕಿ ಅಧ್ಯಯನ ಪೀಠ-ಪರಮೇಶ್ವರ್

ತುಮಕೂರು ವಿವಿಯಲ್ಲಿ ವಾಲ್ಮಿಕಿ ಅಧ್ಯಯನ ಪೀಠ-ಪರಮೇಶ್ವರ್

ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದ ಬಾಲ ಭವನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ. ಜಾತಿ ಗಣತಿ ಆಧಾರದ ಮೇಲೆ ಶೇಕಡಾ 3 ರಷ್ಟಿದ್ದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಮತ್ತು ಶಿಕ್ಷಣಕ್ಕೆ ಮಾತ್ರ ಈ ಮೀಸಲಾತಿ ಅನ್ವಯವಾಗಲಿದೆ ಎಂದು ತಿಳಿಸಿದರು.

ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಸ್ವಾವಲಂಬಿ ಬದುಕು ನಡೆಸಲು ಪರಿಶಿಷ್ಟ ವರ್ಗದ ಸುಮಾರು 5000 ಯುವಕ/ಯುವತಿಯರಿಗೆ ವಿವಿಧ ತರಬೇತಿ ನೀಡಲಾಗಿದೆ. 74367 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ 12 ಬುಡಕಟ್ಟು ಸಮುದಾಯದ 48000 ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸಲು ಸುಮಾರು 140 ಕೋಟಿ ರೂ. ಹಣವನ್ನು ವೆಚ್ಚ ಮಾಡಲಾಗಿದೆ. ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಿದೇಶಿ ವ್ಯಾಸಂಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಬುದ್ಧ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಯಾವುದೇ ವ್ಯಕ್ತಿಯ ವ್ಯಕ್ತಿತ್ವವನ್ನು ಜಾತಿಯಿಂದ ಗುರುತಿಸುವುದು ನಿಂತಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಸಮಾನತೆಯಿಂದ ಬದುಕಬೇಕೆಂಬ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿಯಂತಹ ಮಹನೀಯರ ಜಯಂತಿಯನ್ನು ಆಚರಿಸಲಾಗುತ್ತಿದೆ. ಸಮಾಜದಲ್ಲಿ ಮೇಲು-ಕೀಳು ಭಾವನೆಗಳನ್ನು ತೊರೆದು ಎಲ್ಲರೂ ಸಮಾನರೆಂಬ ಭಾವ ಮೂಡಿದಾಗ ಮಾತ್ರ ಇಂತಹ ಕಾರ್ಯಕ್ರಮಗಳ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಿಸಿ ಶುಭ ಕಲ್ಯಾಣ್, ಶಾಸಕ ಜ್ಯೋತಿ ಗಣೇಶ್, ಎಸ್‌ಪಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಎಡಿಸಿ ಡಾ. ಎನ್. ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಕೃಷ್ಣಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು, ಪಾಲಿಕೆ ಮಾಜಿ ಮಹಾಪೌರ ಬಿ.ಜಿ. ಕೃಷ್ಣಪ್ಪ, ಚಂದ್ರಶೇಖರ ಗೌಡ ಮೊದಲಾದವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular