Saturday, October 19, 2024
Google search engine
HomeUncategorizedಹಳ್ಳಿಗಳಲ್ಲಿ ಕಾನೂನು ಅರಿವು ಮೂಡಿಸಿ-ವಕೀಲರಿಗೆ ಉಪಲೋಕಾಯುಕ್ತ ನ್ಯಾ.ವೀರಪ್ಪ ಸಲಹೆ

ಹಳ್ಳಿಗಳಲ್ಲಿ ಕಾನೂನು ಅರಿವು ಮೂಡಿಸಿ-ವಕೀಲರಿಗೆ ಉಪಲೋಕಾಯುಕ್ತ ನ್ಯಾ.ವೀರಪ್ಪ ಸಲಹೆ

ಕಾನೂನು ಬಲ್ಲವರಾದ ನೀವು ಹಳ್ಳಿಗಳಿಗೆ ತೆರಳಿ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸಬೇಕು ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ವಕೀಲರಿಗೆ ಸಲಹೆ ನೀಡಿದರು.

ತುಮಕೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಆಡಳಿತ ಮತ್ತು ಸಾರ್ವಜನಿಕ ಸೇವೆಯಲ್ಲಿ ವಕೀಲರ ಪಾತ್ರ ಕುರಿತು ಮಾತನಾಡಿದ ಅವರು, ಕಪ್ಪು ಕೋಟು ಹಾಕಿಕೊಂಡವರ ಮೇಲೆ ಸಮಾಜದಲ್ಲಿ ಭಯ ಮತ್ತು ಗೌರವ ಎರಡೂ ಇರುತ್ತದೆ. ಕೋಟು ಹಾಕಿಕೊಂಡ ಮೇಲೆ ನ್ಯಾಯಾಲಯದಲ್ಲಿ ವಾದ ಮಾಡಿದಂತೆಯೇ ಸಾರ್ವಜನಿಕ ಜೀವನಕ್ಕೂ ನಾವು ತೆರೆದುಕೊಳ್ಳಬೇಕು. ವಕೀಲರು ತಂಡವನ್ನು ಮಾಡಿಕೊಂಡು ಹಳ್ಳಿಗಳಿಗೆ ತೆರಳಿ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.

ನ್ಯಾಯಾಲಯಗಳಲ್ಲಿ ನ್ಯಾಯಾಧೀಶರು ಪೀಠಕ್ಕೆ ಆಗಮಿಸುವುದು ತಡವಾದರೆ ನೀವು ಪ್ರಶ್ನೆ ಮಾಡುತ್ತೀರಿ. ಆದರೆ ಎಸಿ, ಡಿಸಿ ನ್ಯಾಯಾಲಯದಲ್ಲಿ ಗಂಟೆಗಟ್ಟಲೆ ಕೂತಿರುತ್ತೀರಿ. ಕೊನೆಗೆ ಇಂದು ಸಿಟಿಂಗ್ ಇಲ್ಲ ಎಂದರೆ ಎದ್ದು ಬರುತ್ತೀರಿ. ಅಲ್ಲಿಯೂ ಪ್ರಶ್ನೆ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಹೀಗಾದರೆ ಅಲ್ಲಿಯೂ ಸಹ ಪ್ರಕರಣಗಳ ಇತ್ಯರ್ಥ ವಿಳಂಬವಾಗುವುದಿಲ್ಲ ಎಂದು ಸಲಹೆ ನೀಡಿದರು.

ಕಕ್ಷಿದಾರರು ನಿಮ್ಮನ್ನೇ ನಂಬಿ ಬಂದಿರುತ್ತಾರೆ. ಅವರಿಗೆ ನೋವಾಗದಂತೆ ನಡೆದುಕೊಳ್ಳಬೇಕು. ಕಕ್ಷಿದಾರರ ಹಿತ ಕಾಪಾಡುವತ್ತ ಗಮನ ಹರಿಸಬೇಕು. ಬರುವವರಲ್ಲಿ ಒಳ್ಳೆಯವರೂ ಇರುತ್ತಾರೆ, ಕೆಟ್ಟವರೂ ಇರುತ್ತಾರೆ. ಅವರ ಮನಸ್ಥಿತಿ ನೋಡಿಕೊಂಡು ಕಾರ್ಯನಿರ್ವಹಿಸುವಂತೆ ವಕೀಲರಿಗೆ ಉಪ ಲೋಕಾಯುಕ್ತರು ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜಯ್ಯ ಮಾತನಾಡಿ, ನ್ಯಾಯಾಲಯಕ್ಕೆ ಹೆಚ್ಚಿನ ಜಾಗದ ಅವಶ್ಯಕತೆ ಇದೆ. ಯಲ್ಲಾಪುರದ ಬಳಿ ಕೇಂದ್ರೀಯ ವಿದ್ಯಾಲಯದ ಸಮೀಪ 35 ಎಕರೆ ಜಾಗ ಇದೆ. ಇದರಲ್ಲಿ 25 ಎಕರೆ ಜಾಗವನ್ನು ನ್ಯಾಯಾಲಯಕ್ಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ತುಮಕೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ಖಾಲಿಯಾಗುತ್ತಿರುವುದರಿಂದ ಆ ಜಾಗವನ್ನು ಸಹ ಬಿಟ್ಟು ಕೊಟ್ಟರೆ ನ್ಯಾಯಾಲಯ ಸಂಕೀರ್ಣಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಸಮಾರಂಭದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಬಿ.ಜಯಂತಕುಮಾರ್, ಲೋಕಾಯುಕ್ತ ಅಪರ ನಿಬಂಧಕ ಜೆ.ವಿ.ವಿಜಯಾನಂದ, ಅರವಿಂದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular