Thursday, November 21, 2024
Google search engine
Homeಮುಖಪುಟವೈಜ್ಞಾನಿಕ ಬೆಳೆನಷ್ಟ ಪರಿಹಾರ ನೀಡಲು ಆಗ್ರಹ

ವೈಜ್ಞಾನಿಕ ಬೆಳೆನಷ್ಟ ಪರಿಹಾರ ನೀಡಲು ಆಗ್ರಹ

ನಿರಂತರವಾಗಿ ಸುರಿದ ಮಳೆಗೆ ಶೇಂಗಾ, ರಾಗಿ ಬೆಳೆಗಳು ಹಾಳಾಗಿದ್ದು, ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ.

ವಿಜ್ಞಾನ ಕೇಂದ್ರದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ರೈತರ ಹೊಲ, ಗದ್ದೆಗಳಲ್ಲಿ ಬೆಳೆದ ಬೆಳೆಯಲ್ಲದೆ, ಮನೆಗಳು, ಗುಡಿಸಲುಗಳು ಬಿದ್ದುಹೋಗಿವೆ. ಜನ ಜಾನುವಾರುಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ. ಆದರೆ ಇದುವರೆಗೂ ಜಿಲ್ಲಾಡಳಿತ ಮಳೆ ಹಾನಿಯನ್ನು ತೀವ್ರವಾಗಿ ಪರಿಗಣಿಸಿದಂತೆ ಕಂಡು ಬರುತ್ತಿಲ್ಲ. ಹಾಗಾಗಿ ಜಿಲ್ಲಾಡಳಿತ ಕೂಡಲೇ ಮಳೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬುದು ರೈತ ಸಂಘದ ಆಗ್ರಹವಾಗಿದೆ ಎಂದರು.

ರೈತರು ಹತ್ತಾರು ವರ್ಷಗಳಿಂದ ಸರಕಾರಿ ಭೂಮಿಯನ್ನು ಉಳುಮೆ ಮಾಡುತ್ತಾ ಫಾರಂ ನಂ 50, 53 ಮತ್ತು 57 ಅಡಿಯಲ್ಲಿ ಸರಕಾರಕ್ಕೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರೂ ಇದುವರೆಗೂ ಬಡವರಿಗೆ ಭೂಮಿ ಸಿಕ್ಕಿಲ್ಲ. ಆದರೆ ಉಳ್ಳುವರಿಗೆ ಭೂಮಿ ದೊರೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೇ ಬಗರ್‌ಹುಕುಂ ಸಾಗುವಳಿ ಅರ್ಜಿಗಳನ್ನು ತುರ್ತು ವಿಲೇವರಿ ಮಾಡುವಂತೆ ಸೂಚನೆ ನೀಡಿದ್ದರೂ ತಹಶೀಲ್ದಾರರುಗಳು ಗಮನಹರಿಸಿದಂತೆ ಕಂಡು ಬರುತ್ತಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಬಗರ್‌ಹುಕುಂ ಭೂಮಿಗಾಗಿ ಅರ್ಜಿ ಸಲ್ಲಿಸಿರುವ ಎಲ್ಲಾ ಆರ್ಹ ರೈತರಿಗೂ ಭೂಮಿ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.

ವಾಮಮಾರ್ಗದಿಂದ ದೇಶಕ್ಕೆ ನುಸುಳಿದ ಬಿಟಿ ಹತ್ತಿಯಿಂದ ಪರಿಸರದ ಮೇಲಾಗಿರುವ ಕೆಟ್ಟ ಪರಿಣಾಮಗಳ ಕುರಿತು ಹಲವಾರು ತಜ್ಞರು ತಮ್ಮ ಅಭಿಪ್ರಾಯ ಮಂಡಿಸಿ ಕುಲಾಂತರಿ ತಳಿ ಬೀಜಗಳ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದರೂ ಸುಪ್ರಿಂ ಕೋರ್ಟು ಕುಲಾಂತರಿ ಬೀಜ ನೀತಿಯ ಕುರಿತು ಸಮಿತಿ ರಚಿಸಲು ಎಂ.ಎನ್.ಸಿ. ಕಂಪನಿಗಳಾದ ಮ್ಯಾನ್ಸೆಂಟೋ ಮತ್ತು ಬೇಯರ್ ಕಂಪನಿಗಳ ನೇತೃತ್ವದಲ್ಲಿ ರೈತರು, ಕೃಷಿ ತಜ್ಞರು, ಸಾರ್ವಜನಿಕರನ್ನು ಒಳಗೊಂಡ ಸಮಿತಿಯನ್ನು 4 ತಿಂಗಳಲ್ಲಿ ರಚಿಸುವಂತೆ ನಿರ್ದೇಶನ ನೀಡಿರುವುದು ಅತ್ಯಂತ ಅಪಾಯಕಾರಿಯಾಗಿದೆ ಎಂದರು.

ರೈತರು, ರಾಜಕೀಯ ನಾಯಕರ ವಿರೋಧದ ನಡುವೆಯೂ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಮುಂದುವರೆಸಲು ಗುತ್ತಿಗೆದಾರರು ಪ್ರಯತ್ನಿಸುತಿದ್ದು, ಇದು ಸರಕಾರ ಮತ್ತು ರೈತರ ನಡುವಿನ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಯಾವುದೇ ಭೂಸ್ವಾಧೀನವಿಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತ ಕೂಡಲೇ ಮಧ್ಯ ಪ್ರವೇಶಿಸಿ, ಜಿಲ್ಲೆಯ ಜನತೆಗೆ ನ್ಯಾಯ ಕೊಡಿಸಬೇಕು. ಎಕ್ಸ್ಪ್ರೆಸ್ ಕೆನಾಲ್‌ನಿಂದ ಜಿಲ್ಲೆಯ 4-5 ತಾಲೂಕುಗಳಿಗೆ ತೀವ್ರ ಅನ್ಯಾಯವಾಗಲಿದೆ. ಹಾಗಾಗಿ ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎ.ಗೋವಿಂದರಾಜು ಒತ್ತಾಯಿಸಿದರು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ, ಜಿಲ್ಲೆಯ ಮುಖಂಡರಾದ ಕಾಳೇಗೌಡ, ಬಸವರಾಜು, ಶಿವಕುಮಾರ್, ಜಗದೀಶ್, ವೆಂಕಟೇಗೌಡ, ಲಕ್ಷö್ಮಣಗೌಡ, ನಾಗರತ್ನಮ್ಮ, ಚಿಕ್ಕಬೋರೇಗೌಡ, ರಹಮತ್ ಸಾಬ್, ಭಾಗ್ಯಮ್ಮ, ಲೋಕೇಶ್, ರವೀಶ್, ಚನ್ನಬಸಣ್ಣ, ಅರೇಹಳ್ಳಿ ಮಂಜುನಾಥ್, ಶಬ್ಬೀರ ಕೊರಟಗೆರೆ, ಕೆಂಚಪ್ಪ, ಚಿರತೆ ಚಿಕ್ಕಣ್ಣ, ತಿಮ್ಮೇಗೌಡ, ಮಹೇಶ್, ಬಸವರಾಜು ಮತ್ತಿತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular