Thursday, November 21, 2024
Google search engine
Homeಜಿಲ್ಲೆಒಳಮೀಸಲಾತಿ ಜಾರಿಗೆ ತಮಟೆ ಸದ್ದು-ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಒಳಮೀಸಲಾತಿ ಜಾರಿಗೆ ತಮಟೆ ಸದ್ದು-ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಬೇಕು, ಅಲಿಯವರೆಗೆ ಸರ್ಕಾರದ ನೇಮಕಾತಿಗಳಿಗೆ ತಡೆಯೊಡ್ಡಬೇಕು ಎಂದು ಆಗ್ರಹಿಸಿ ಮಾದಿಗ ಸಂಘಟನೆಗಳ ಸಮೂಹಗಳ ಒಕ್ಕೂಟದಿಂದ ಪಕ್ಷಾತೀತವಾಗಿ ತುಮಕೂರಿನಲ್ಲಿ ಬೃಹತ್ ತಮಟೆ ಚಳವಳಿ ನಡೆಸಲಾಯಿತು.
ತುಮಕೂರು ಜಿಲ್ಲೆಯ ಹತ್ತು ತಾಲೂಕುಗಳಿಂದ ಆಗಮಿಸಿದ್ದ ಮಾದಿಗ ಸಮುದಾಯದ ಬಂಧುಗಳು, ನಗರದ ಟೌನ್‌ಹಾಲ್ ಬಳಿ ಸಮಾವೇಶಗೊಂಡು, ಅಲ್ಲಿಂದ ನೂರಾರು ತಮಟೆ ಸದ್ದಿನೊಂದಿಗೆ ಡಿಸಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಡಿಸಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾದಿಗ ದಂಡೋರದ ಪಾವಗಡ ಶ್ರೀರಾಮ್, ನ್ಯಾ.ಎ.ಜೆ.ಸದಾಶಿವ ನೇತೃತ್ವದ ಆಯೋಗ ಸರಕಾರದ ನೌಕರವರ್ಗವನ್ನು ಬಳಸಿಕೊಂಡು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಿ 2012ರಲ್ಲಿ ವರದಿ ನೀಡಿದ್ದರೂ ಇದುವರೆಗೂ ವರದಿಯನ್ನು ಜಾರಿ ಮಾಡಲು ಸರಕಾರಗಳು ಹಿಂದೇಟು ಹಾಕುತ್ತಾ ಬಂದಿದೆ. 2024ರ ಆಗಸ್ಟ್ 1ರ ಸುಪ್ರಿಂಕೋರ್ಟು ತೀರ್ಪು ಸಹ ಒಳಮೀಸಲಾತಿ ಜಾರಿ ಆಯಾಯ ರಾಜ್ಯಗಳಿಗೆ ಬಿಟ್ಟ ವಿಚಾರ ಎಂದು ಹೇಳಿದೆ. ಹಾಗಾಗಿ ಸರಕಾರ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು.ಅಲ್ಲಿಯವರೆಗೆ ನೇಮಕಾತಿಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ಎಲ್.ಜಿ ಹಾವನೂರು ಆಯೋಗವು ತನ್ನ ವರದಿಯಲ್ಲಿ ಪರಿಶಿಷ್ಟ ಜಾತಿಯ ಜನಸಂಖ್ಯೆಯಲ್ಲಿ ಮಾದಿಗ ಜನಾಂಗದ ಜನಸಂಖ್ಯೆ ಶೇ.58 ಇರುತ್ತದೆ ಎಂಬ ವಿಷಯವನ್ನು ಸ್ಪಷ್ಟಪಡಿಸಿದೆ. ನ್ಯಾ.ಹೆಚ್.ಕಾಂತರಾಜ್ ಆಯೋಗವೂ ಸಹ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಮಾದಿಗರ ಜನಸಂಖ್ಯೆ ಅಧಿಕವಾಗಿದೆ ಎಂಬ ವಿಷಯವನ್ನು ಸ್ಪಷ್ಟಪಡಿಸಿದೆ. ಆದರೂ ದತ್ತಾಂಶಗಳ ಕೊರತೆಯ ನೆಪವೊಡ್ಡಿ ಸುಪ್ರಿಂಕೋರ್ಟಿನ ತೀರ್ಪಿನ ನಂತರವೂ ಸರಕಾರ ಒಳಮೀಸಲಾತಿ ಜಾರಿಗೆ ಮೀನಾಮೇಷ ಎಣಿಸುತ್ತಿರುವುದು ಖಂಡನೀಯ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಮಾತನಾಡಿ, ಒಳಮೀಸಲಾತಿ ಮಾದಿಗ ಸಮುದಾಯಗಳ ಬಹುದಿನ ಬೇಡಿಕೆ. ಚಿತ್ರದುರ್ಗದ ಐಕ್ಯತಾ ಸಮಾವೇಶ ಹಾಗೂ 2023ರ ಚುನಾವಣೆಯ ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಸರಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷ ಕಳೆದರೂ, ಸುಪ್ರಿಂಕೋರ್ಟಿನ ತೀರ್ಪು ಬಂದ ಎರಡು ತಿಂಗಳು ಕಳೆದರೂ ಈ ಬಗ್ಗೆ ಸ್ಪಷ್ಟ ನಿಲುವು ತಾಳದಿರುವುದು ದುರಾದೃಷ್ಟಕರ. ಸರಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಧಿಕಾರದಲ್ಲಿ ಉಳಿಯುವುದು ಕಷ್ಟವಾಗಲಿದೆ ಎಂಬ ಎಚ್ಚರಿಕೆ ನೀಡಿದರು.

ಮಾದಿಗ ದಂಡೋರದ ಕೊಡಿಯಾಲ ಮಹದೇವ, ಹೋರಾಟಗಾರರಾದ ಕೊಟ್ಟ ಶಂಕರ್, ಮಾರುತಿ ಗಂಗಹನುಮಯ್ಯ, ಡಾ.ಬಸವರಾಜು, ಕೇಬಲ ರಘು ಸೇರಿದಂತೆ ಹಲವರು ಮಾತನಾಡಿದರು. ಡಿ.ಟಿ.ವೆಂಕಟೇಶ್, ರಾಜಸಿಂಹ, ನರಸೀಯಪ್ಪ, ನರಸಿಂಹಯ್ಯ, ಎಂ.ವಿ.ರಾಘವೇದ್ರಸ್ವಾಮಿ, ಸಿದ್ದೇಶ ನೆಗಲಾಲ್, ನಿವೃತ್ತ ಇಂಜಿನಿಯರ್ ಶಿವಕುಮಾರ್, ಯೋಗೀಶ್, ಸೋರೆಕುಂಟೆ, ಮಹಲಿಂಗಯ್ಯ, ಹನುಮಂತರಾಯಪ್ಪ, ಚೇಳೂರು ಶಿವನಂಜಪ್ಪ, ಬಂಡೆಕುಮಾರ್, ಡಾ.ಮುಕುಂದ್, ಡಾ.ಹನುಮಂತರಾಯಪ್ಪ, ಲಕ್ಷಿö್ಮರಂಗಯ್ಯ, ಡಾ.ಹುಲಿಕುಂಟೆ ಮೂರ್ತಿ, ಡಾ.ನರಸಿಂಹಮೂರ್ತಿ, ರಾಮಯ್ಯ, ನಾಗರಾಜು, ಕುಂದೂರು ಮುರುಳಿ, ವಿರೂಪಾಕ್ಷ ಡ್ಯಾಗೇರಹಳ್ಳಿ, ಗೂಳೂರು ಸಿದ್ದರಾಜು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವಕೀಲರ ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಅನುಸಾರದಂತೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಅಸ್ಪೃಶ್ಯ ಜನಾಂಗದ ವಕೀಲರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ 30 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಅಸ್ಪೃಶ್ಯರು ಸಮಾಜದಲ್ಲಿ ಅನುಭವಿಸುತ್ತಿರುವ ಶೋಷಣೆ, ಅವಕಾಶ ವಂಚನೆ, ಹಾಗೂ ತುಳಿತಕ್ಕೊಳಗಾದವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬುದು ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಆಶಯವಾಗಿದೆ. ಅದರಂತೆ ಪರಿಶಿಷ್ಟ ಜನಾಂಗದಲ್ಲಿರುವ 101 ಜಾತಿಗಳಿಗೆ ಜನಸಂಖ್ಯೆ ಆಧಾರದಲ್ಲಿ ಅವಕಾಶ, ಸವಲತ್ತು ದೊರೆಯಬೇಕು ಎಂದು ಹೇಳುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅನುಸರಿಸಿ ಒಳಮೀಸಲಾತಿ ವರ್ಗೀಕರಣ ಮಾಡಿ ಜಾರಿ ಮಾಡಬೇಕು ಎಂದು ವಕೀಲರಾದ ರಂಗಧಾಮಯ್ಯ, ಗೋವಿಂದರಾಜು, ಹರೀಶ್, ರಾಮಾಂಜನಯ್ಯ, ಲಿಂಗರಾಜು, ಕೆ.ಎನ್.ಹರೀಶ್, ಮರಿಚೆನ್ನಮ್ಮ ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular