Thursday, November 21, 2024
Google search engine
Homeಮುಖಪುಟಒಳಮೀಸಲಾತಿಗೆ ಮೂರು ತಿಂಗಳು ಸಮಯವಕಾಶ

ಒಳಮೀಸಲಾತಿಗೆ ಮೂರು ತಿಂಗಳು ಸಮಯವಕಾಶ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.

ಈ ವಿಚಾರವನ್ನು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ ಎಂದಿದ್ದಾರೆ.

ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ. ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular