Thursday, September 19, 2024
Google search engine
Homeಮುಖಪುಟನೆರೆ ಪರಿಹಾರದಲ್ಲಿ ಕೇಂದ್ರ ತಾರತಮ್ಯ-ಸಿದ್ದು

ನೆರೆ ಪರಿಹಾರದಲ್ಲಿ ಕೇಂದ್ರ ತಾರತಮ್ಯ-ಸಿದ್ದು

ನೆರೆ ಪರಿಹಾರದಲ್ಲಿ ಕೇಂದ್ರ ಸರ್ಕಾರ ಸತತ ಮೂರು ವರ್ಷಗಳಿಂದಲೂ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬರುತ್ತಿದೆ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ನ್ಯಾಯ ಒದಗಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ವಿಷಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷಗಳ ಸಹಕಾರ ಬಯಸಿದರೆ ನಾವು ನಿಯೋಗದಲ್ಲಿ ಬಂದು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಸಿದ್ದರಿದ್ದೇವೆ ಎಂದು ಸಲಹೆ ನೀಡಿದ್ದಾರೆ.

ಹಾನಿಗೊಳಗಾಗಿರುವ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಕಚೇರಿ ಕಟ್ಟಡಗಳನ್ನು ದುರಸ್ತಿ ಮಾಡಬೇಕು ಹಾಗೂ ಪ್ರವಾಹ ಸಂತ್ರಸ್ತರ ಆರೋಗ್ಯದ ಕಾಳಜಿಯನ್ನು ಸರ್ಕಾರವೇ ವಹಿಸಬೇಕು. ಆದರೆ ರಾಜ್ಯ ಸರ್ಕಾರ ಭಿನ್ನಮತದ ಶಮನದಲ್ಲಿ ಕಾಲಕಳೆಯುತ್ತಿದೆ ಎಂದು ಆರೋಪಿಸಿದ್ದಾರೆ.

2019ರ ಪ್ರವಾಹದ ಸಂದರ್ಭದಲ್ಲಿ ಸಂಪೂರ್ಣ ಮನೆ ನಾಶವಾಗಿದ್ದರೆ 10 ಲಕ್ಷ ರೂ, ಭಾಗಶಃ ಹಾನಿಯಾಗಿದ್ದರೆ 3 ಲಕ್ಷ ರೂ, ಸ್ವಲ್ಪ ಹಾನಿಯಾಗಿದ್ದರೆ 50 ಸಾವಿರದಿಂದ 1 ಲಕ್ಷ ರೂ ನೀಡುವುದಾಗಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಆದರೆ ಪರಿಹಾರ ಇನ್ನೂ ಸಂತ್ರಸ್ಥರ ಕೈ ಸೇರಿಲ್ಲ ಎಂದು ತಿಳಿಸಿದ್ದಾರೆ.

2019 ಮತ್ತು 2020 ರಲ್ಲಿ ಹಾನಿಗೊಳಗಾದ ಪ್ರದೇಶಗಳ ಜನರಿಗೆ ಇದುವರೆಗೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಮನೆ ಕಳೆದುಕೊಂಡವರಿಗೆ ಮನೆಗಳನ್ನು ನೀಡಿಲ್ಲ. ನದಿ ಪಾತ್ರದ ಗ್ರಾಮಗಳ ಸ್ಥಳಾಂತರ ಆಗಿಲ್ಲ ಎಂದು ನೆರೆಪೀಡಿತರು ತಮ್ಮ ಸಂಕಷ್ಟ ಹೇಳಿಕೊಂಡು ಕಣ್ಣೀರಿಡುತ್ತಿದ್ದಾರೆ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ.

ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಮನೆ – ಬೆಳೆ – ಜಾನುವಾರು ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪತ್ರದ ಮೂಲಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular