Wednesday, November 20, 2024
Google search engine
Homeಮುಖಪುಟಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್: ಪರಮೇಶ್ವರ್

ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್: ಪರಮೇಶ್ವರ್

ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು, ನಾಲ್ಕು ಚಕ್ರ ವಾಹನ(ವೈಟ್ ಬೋರ್ಡ್) ಹೊಂದಿರುವವರು ನಿಯಮಾವಳಿಯನ್ವಯ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಿರುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಅಂಕಿ ಅಂಶಗಳ ಪ್ರಕಾರ ಶೇ. 80ರಷ್ಟು ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿವೆ. ಕರ್ನಾಟಕವು ದೇಶದಲ್ಲಿ ತೆರಿಗೆ ಪಾವತಿಸುವಲ್ಲಿ 2ನೇ ಸ್ಥಾನದಲ್ಲಿದ್ದರೂ ಶೇ.80ರಷ್ಟು ಬಿಪಿಎಲ್ ಕುಟುಂಬವಿರಲು ಹೇಗೆ ಸಾಧ್ಯ? ಜಿಲ್ಲೆಯಲ್ಲಿ 4547 ಆದಾಯ ತೆರಿಗೆ ಪಾವತಿದಾರರು, 219 ಸರ್ಕಾರಿ ನೌಕರರು, ವಾರ್ಷಿಕ 1.20 ಲಕ್ಷ ರೂ.ಗಳಿಗಿಂತಲೂ ಹೆಚ್ಚು ಕೌಟುಂಬಿಕ ಆದಾಯ ಹೊಂದಿರುವವರು ಸೇರಿ 19 ಸಾವಿರಕ್ಕು ಹೆಚ್ಚು ಪಡಿತರ ಚೀಟಿಯನ್ನು ಹೊಂದಿದ್ದಾರೆ. ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದವರನ್ನು ಪತ್ತೆಹಚ್ಚಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಪಿಎಲ್ ಕುಟುಂಬದ ಅರ್ಹರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕೆಂಬ ದೃಷ್ಟಿಯಿಂದ ಅನರ್ಹ ಪಡಿತರ ಚೀಟಿಯನ್ನು ರದ್ದುಪಡಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಸಲುವಾಗಿ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಜನತೆ ನಮ್ಮ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಹಲವಾರು ಭರವಸೆಗಳನ್ನು ಈಡೇರಿಸಿದ್ದೇವೆ. ಐದು ವರ್ಷ ಕಳೆಯುವುದರೊಳಗೆ ಎಲ್ಲ ಭರವಸೆಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಿಸಿ ಶುಭ ಕಲ್ಯಾಣ್, ಎಸ್‌ಪಿ ಕೆ.ವಿ. ಅಶೋಕ್, ಜಿಪಂ ಸಿಇಲ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular