Thursday, November 21, 2024
Google search engine
Homeಜಿಲ್ಲೆಡಾಬಾ ಹೊನ್ನಮ್ಮ ಹತ್ಯೆ ಪ್ರಕರಣ-17 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಡಾಬಾ ಹೊನ್ನಮ್ಮ ಹತ್ಯೆ ಪ್ರಕರಣ-17 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯೊಬ್ಬರ ಹತ್ಯೆ ಕುರಿತು ಸುದೀರ್ಘ 14 ವರ್ಷಗಳ ವಿಚಾರಣೆ ನಡೆದ ಈ ಪ್ರಕರಣದಲ್ಲಿ ತುಮಕೂರು 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ನಾಗೀರೆಡ್ಡಿ 17 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಇದೇ ಪ್ರಕರಣದಲ್ಲಿ ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ತಲಾ 13 ಸಾವಿರ ರೂ. ದಂಡವನ್ನು ವಿಧಿಸಿ ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಿದ್ದಾರೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ, ಜೆಡಿಎಸ್ ಕಾರ್ಯಕರ್ತೆಯಾಗಿದ್ದ ಹೊನ್ನಮ್ಮ(45) ಅವರನ್ನು ಕೊಲೆ ಮಾಡಲಾಗಿತ್ತು. ಸುದೀರ್ಘ 14 ವರ್ಷಗಳ ಕಾಲ ವಿಚಾರಣೆ ನಡೆದು ಗುರುವಾರ ಶಿಕ್ಷೆ ಪ್ರಕಟವಾಗಿದೆ.

ಒಟ್ಟು 27 ಆರೋಪಿಗಳಲ್ಲಿ ಹನುಮಂತಯ್ಯ, ವೆಂಕಟೇಶ್, ದಾಸಪ್ಪ, ರಾಮಯ್ಯ, ಬುಳ್ಳೆ ಹನುಮಂತಯ್ಯ ಸೇರಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದಂತೆ ಇಬ್ಬರು ಮಹಿಳೆಯರು ಸೇರಿ 21 ಮಂದಿ ಅಪರಾಧಿಗಳ ಪೈಕಿ 5,6,7,8 ಅಪರಾಧಿಗಳಿಗೆ 2 ವರ್ಷ ಹಾಗೂ ಉಳಿದ 17 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ 13 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ವಿಶೇಷ ಸರಕಾರಿ ಅಭಿಯೋಜಕಿ ಬಿ.ಎಸ್.ಜ್ಯೋತಿ ವಾದ ಮಂಡಿಸಿದ್ದರು.

ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರದ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಹೊನ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತ್ತಿತ್ತು. ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರಿದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು 2010 ಜುಲೈ 3ರಂದು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular