Thursday, January 29, 2026
Google search engine
Homeಜಿಲ್ಲೆಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ-ಡಿಸಿ

ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ-ಡಿಸಿ

ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 4 ದಿನಗಳ ಕಾಲ ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಡಿಸಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು-ನೋವುಗಳು ಉಂಟಾಗಬಹುದಾದ್ದರಿAದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ.

ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನದಲ್ಲಿದ್ದುಕೊಂಡು ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಮುಂಜಾಗ್ರತೆ ವಹಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ/ಕಟ್ಟಡ, ದುರ್ಬಲ ಮರದ ಕೊಂಬೆ, ಜಲಕಾಯ/ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಶಾಲೆ/ಅಂಗನವಾಡಿ ಮೇಲ್ಛಾವಣಿ/ಗೋಡೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ಕೆಳ ಸೇತುವೆ ರಸ್ತೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular