Wednesday, December 4, 2024
Google search engine
Homeಮುಖಪುಟಕಾನೂನು ಚೌಕಟ್ಟಿನೊಳಗೆ ಬಂದರೆ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕ್ರಮ-ಸಿಎಂ ಸಿದ್ದರಾಮಯ್ಯ

ಕಾನೂನು ಚೌಕಟ್ಟಿನೊಳಗೆ ಬಂದರೆ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕ್ರಮ-ಸಿಎಂ ಸಿದ್ದರಾಮಯ್ಯ

ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಪಕ್ಷ ಬಿಡಲಿಲ್ಲ. ಕುಮಾರಸ್ವಾಮಿ ಅವರು ಹೇಳಿದ್ದನ್ನೇ ಸತ್ಯ ಎಂದು ಹೇಳಿದರೆ ಹೇಗೆ? ಎಂದು ಹೇಳಿದ್ದಾರೆ.

ಸತ್ಯ ಸಂಗತಿಯೆಂದರೆ ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ, ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ ಎಂದರು.

ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಸಂಘದ ಜಂಟಿ ಆಶ್ರಯದಲ್ಲಿ ಸಮಾವೇಶ ನಡೆಯುತ್ತಿದೆ. ಇದಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಲಾಗಿದೆ. ಪಕ್ಷವು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಪಕ್ಷವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯತೀತವಾಗಿ ಉಳಿದಿದೆಯೇ? ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ರೀತಿ ಸೆಕ್ಯುಲರ್ ಆಗಿದೆ? ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯತೀತ ಇರಲೇಬೇಕೆಂದು ಹೇಳಿದೆ. ಜೆಡಿಎಸ್ ನವರಿಗೆ ಪಕ್ಷ ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಇರಲಿಲ್ಲ. ನಾನು ದೇವೇಗೌಡರು, ಇಬ್ರಾಹಿಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಜೆಡಿಎಸ್ ರಚನೆ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ. ಇದೆಲ್ಲಾ ಕುಮಾರಸ್ವಾಮಿ ಅವರಿಗೆ ಗೊತ್ತಾ? ಎಂದು ಮಾಧ್ಯಮದವರನ್ನೇ ಕೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular